LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು : ಸನಾತನ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ಕ್ರೀಡಾ ಸಚಿವ ಉದಯನಿಧಿ ಸ್ಟ್ಯಾಲಿನ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಸನಾತನ ಧರ್ಮದ ಕುರಿತು ಹೇಳಿಕೆ ನೀಡಿದ್ದ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಸಲ್ಲಿಸಿದ್ದ ಅರ್ಜಿಯನ್ನು ಆಧರಿಸಿ ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು. ಉದಯನಿಧಿ ಸ್ಟ್ಯಾಲಿನ್‌ಗೆ ಪ್ರಕರಣದಲ್ಲಿ‌ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಹಾಗೂ ವಿಚಾರಣೆಯನ್ನ ಮುಂದೂಡುವಂತೆ ವಕೀಲರು ಸಲ್ಲಿಸಿದ್ದ ಮನವಿಯನ್ನ ಪರಿಗಣಿಸಿದ ನ್ಯಾಯಾಲಯ, ಆಗಸ್ಟ್ 8ಕ್ಕೆ ವಿಚಾರಣೆಯನ್ನ ಮುಂದೂಡಿದೆ. ಉದಯನಿಧಿ ಸ್ಟ್ಯಾಲಿನ್‌ಗೆ 1 ಲಕ್ಷ ಬಾಂಡ್ ಶ್ಯೂರಿಟಿಯೊಂದಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಹಿನ್ನೆಲೆ ಕಳೆದ ವರ್ಷ ಸೆಪ್ಟೆಂಬರ್ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸಮಾರಂಭವೊಂದರಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ ಸ್ಟ್ಯಾಲಿನ್, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಹಾಗೂ ಕೊರೊನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿರುವ ಸನಾತನ ಧರ್ಮವನ್ನ ನಿರ್ಮೂಲನೆ ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಉದಯನಿಧಿ ಹೇಳಿಕೆಯನ್ನ ಖಂಡಿಸಿದ್ದ ಅನೇಕ ಹಿಂದೂ ಮುಖಂಡರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಟಿಎಂಗಳಲ್ಲಿ ದಿನದ 24 ಗಂಟೆ ಸೆಕ್ಯೂರಿಟಿ ಗಾರ್ಡ್‌ಗಳ ಅಗತ್ಯವಿಲ್ಲ- ಸುಪ್ರೀಂ ಕೋರ್ಟ್SSLC ಪೂರ್ವಸಿದ್ಧತಾ ಪರೀಕ್ಷೆ ಸಮಯ ಬದಲುಚಿನ್ನಾಭರಣ ಪ್ರಿಯರಿಗೆ ಗುಡ್‌ ನ್ಯೂಸ್‌- ಬೆಲೆಯಲ್ಲಿ ಇಳಿಕೆಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬದಲಾವಣೆಗೆ ದಿನಾಂಕ ಫಿಕ್ಸ್ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು ?ಮಹಿಳಾ ಉದ್ಯೋಗಿಗಳಿಗೆ ವರ್ಕ್​ ಫ್ರಂ ಹೋಂ ನಿಯಮ ಜಾರಿಗೆ ಮುಂದಾದ ಆಂದ್ರಪ್ರದೇಶಪ್ರಧಾನಿ ಮೋದಿ ವಿಮಾನದ ಮೇಲೆ ದಾಳಿ ಮಾಡುವುದಾಗಿ ಉಗ್ರರ ಎಚ್ಚರಿಕೆ..!ರೇಷನ್‌ ಕಾರ್ಡ್‌ ನಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿಗೆ ಮತ್ತೊಮ್ಮೆ ಅವಕಾಶಪತ್ನಿ ಅನುಮತಿ ಇಲ್ಲದೆ, ಆಕೆಗೆ ಗೊತ್ತಿಲ್ಲದೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ: ಹೈಕೋರ್ಟ್ಮೈಸೂರು ಗಲಭೆ ಹಿಂದೆ RSS ಕೈವಾಡ: ಲಕ್ಷ್ಮಣ್ ಆರೋಪಬೈಕ್ ಚಲಾಯಿಸಿದ ಅಪ್ರಾಪ್ತನ ಪೋಷಕರಿಗೆ 25 ಸಾವಿರ ರೂಪಾಯಿ ದಂಡ