E-PAPER
17 Nov 2026, 12:23:32 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಬಿಜೆಪಿ ಪಾದಯಾತ್ರೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಮಂಡ್ಯ-06:ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು ‌

ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಮುಂದಾಳತ್ವದಲ್ಲಿ ಮಂಡ್ಯದಲ್ಲಿ ಮಂಗಳವಾರ ನಡೆದ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು.

ತನ್ನ ಗರ್ಭದಲ್ಲಿ ಭ್ರಷ್ಟಾಚಾರವನ್ನೇ ತುಂಬಿಕೊಂಡು, ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಎನ್ನುವಂತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಕೇವಲ ಒಂದು ವರ್ಷದ ಹಿಂದೆ ಆಡಳಿತಕ್ಕೆ ಬಂದಿರುವ ನಮ್ಮ ಸರಕಾರದ ಮೇಲೆ ಇಲ್ಲದ ಆರೋಪಗಳನ್ನು ಮಾಡುವ ಮೂಲಕ ಜನಪರ ಆಡಳಿತ ನಡೆಸುವುದಕ್ಕೆ ಸಹಕಾರ ನೀಡುವ ಬದಲು ವಿನಾಕಾರಣ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎರಡನೇ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸದ ಬಿಜೆಪಿ-ಜೆಡಿಎಸ್ ಪಕ್ಷದವರು, ಇಂದು ಇಲ್ಲ ಸಲ್ಲದ ಆರೋಪ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇಂದಿರಾಗಾಂಧಿ ಪ್ರಧಾನಿಯಾಗಿದ್ದ ವೇಳೆ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ, ಜನ ಸಾಮಾನ್ಯರಿಗೂ ಸಾಲ ಸಿಗುವಂತೆ ಮಾಡಿದರು. ಆದರೆ, ಇಂದಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ದೇಶದ ಬ್ಯಾಂಕ್ ಗಳನ್ನೇ ಖಾಸಗೀಕರಣ ಮಾಡುತ್ತಿದೆ. ದೇಶದ ಶ್ರೀಮಂತರ ಪರವಾಗಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು.

* *ಕುಮಾರಸ್ವಾಮಿ ನೈತಿಕತೆ ಇಲ್ಲದ ರಾಜಕಾರಣಿ*
ನಮ್ಮ ಕುಟುಂಬಕ್ಕೆ ವಿಷ ಹಾಕಿದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡ ಜೊತೆ ವೇದಿಕೆ ಹಂಚಿಕೊಳ್ಳುವುದಿಲ್ಲ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳುತ್ತಿದ್ದ ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ಅವರಿಂದ ಅವಮಾನವಾಗಿರುವ ನೂರಾರು ಮಹಿಳೆಯರ ಬಗ್ಗೆ ಯೋಚಿಸುತ್ತಿಲ್ಲ. ಇಂದೆಥಾ ನ್ಯಾಯ. ಇದನ್ನು ನೋಡಿದರೆ ಕುಮಾರಸ್ವಾಮಿ ಒಬ್ಬ ನೈತಿಕತೆ ಇಲ್ಲದ ರಾಜಕಾರಣಿ ಎಂದು ಟೀಕಾ ಪ್ರಹಾರ ನಡೆಸಿದರು.

ಈ ಹಿಂದೆ ವಿಧಾನ ಪರಿಷತ್ ನಲ್ಲಿ ಬಿಎಸ್ ಯಡಿಯೂರಪ್ಪ ಅವರೇ, ಮುಡಾದಲ್ಲಿ ದೇವೇಗೌಡ, ಕುಮಾರಸ್ವಾಮಿ ಕುಟುಂಬಕ್ಕೆ ಸೈಟ್ ಹಂಚಲಾಗಿದೆ ಎಂದು ಆರೋಪಿಸಿದ್ದರು. ಆದರೆ, ಈಗ ಕುಮಾರಸ್ವಾಮಿ, ವಿಜಯೇಂದ್ರ ಅವರೇ ಒಟ್ಟಾಗಿ ಪಾದಯಾತ್ರೆ ನಡೆಸುತ್ತಿರುವುದು ವಿಪರ್ಯಾಸ ಎಂದರು.

* *ಇಂದೇ ಗೃಹಲಕ್ಷ್ಮಿ ಯೋಜನೆ ಹಣ*
*
ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು* . *ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ.* *ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದರು.*

ಈ ವೇಳೆ ಸಚಿವರಾದ ಕೆ.ಎಚ್.ಮುನಿಯಪ್ಪ, ಬೋಸರಾಜು, ಚಲುವರಾಯಸ್ವಾಮಿ, ಕೃಷ್ಣ ಬೈರೇಗೌಡ, ಡಿ.ಸುಧಾಕರ್, ರಾಮಲಿಂಗ ರೆಡ್ಡಿ, ಪ್ರಿಯಾಂಕ್ ಖರ್ಗೆ, ಶರಣ್ ಪ್ರಕಾಶ್ ಪಾಟೀಲ್, ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪುಷ್ಪ ಅಮರ್ ನಾಥ್, ರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ್, ಶಾಸಕರಾದ ರವಿಕುಮಾರ್ ಗಣಿಗ, ಎಚ್.ಸಿ. ಬಾಲಕೃಷ್ಣ, ಟಿ.ರಘುಮೂರ್ತಿ, ಗೋವಿಂದಪ್ಪ, ರಮೇಶ್ ಬಾಬು ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಐವಾನ್ ಡಿಸೋಜ, ಮಧು ಮಾದೇಗೌಡ, ಮುಖ್ಯಮಂತ್ರಿಗಳ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ ಸೇರಿದಂತೆ ಇತರರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.