LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ತಾಯಿ ಚಾಮುಂಡೇಶ್ವರಿಯ ಕೃಪೆ ನನ್ನ ಮೇಲೆ ಸದಾ ಇರಲಿದೆ'- ಸಿಎಂ

ಮೈಸೂರು : ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಮಾಡುವ ಸೌಭಾಗ್ಯವನ್ನು ರಾಜ್ಯದ ಜನ ಹಲವು ಬಾರಿ ಒದಗಿಸಿಕೊಟ್ಟಿದ್ದಾರೆ. ತಾಯಿಯ ಆಶೀರ್ವಾದ ನನ್ನ ಮೇಲೆ ಸದಾ ಇರುವ ಕಾರಣದಿಂದಲೇ ದೀರ್ಘಕಾಲದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.

ದಸರಾ ಉತ್ಸವದ ಬಗ್ಗೆ ಪತ್ರಿಕೆಗಳಲ್ಲಿ ವತಿಯಿಂದ ಪ್ರಕಟವಾದ ಸರ್ಕಾರದ ಜಾಹಿರಾತಿನ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷೆಯನ್ನು ದಸರೆಯ ಪ್ರತೀಕ. ವಿಜಯನಗರ ಅರಸರ ಜಯದ ಸಂಕೇತವಾಗಿ ಪ್ರಾರಂಭಿಸಲಾದ ಆಯುಧಪೂಜೆ ದಸರಾ ಉತ್ಸವವನ್ನು ಮೈಸೂರು ಒಡೆಯರ್ ರವರು ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದರು.

ದುಷ್ಟರ ಸಂಹಾರ ಆಗಬೇಕಿದೆ ಎಂದು ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು ಈ ರೀತಿ ಸುಳ್ಳು ಮಾತನಾಡುವುದು ತಪ್ಪು. ಕೋರ್ಟ್ ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದರು.

ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ ಎಂದರು.

ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರೋಗ್ಯ ಕ್ಷೇತ್ರಕ್ಕೆ ಸಿದ್ದರಾಮಯ್ಯ ಘೋಷಿಸಿದ ಕೊಡುಗೆಗಳುKarnataka Budget 2025: ಸಿದ್ದರಾಮಯ್ಯ ಬಜೆಟ್ ನಲ್ಲಿ ` ಕೃಷಿ ವಲಯ’ಕ್ಕೆ ಸಿಕ್ಕ ಕೊಡುಗೆಗಳೇನು?Karnataka Budget 2025: ಕಲಾವಿದರಿಗೆ ಸಿಹಿಸುದ್ದಿ - ಮಾಸಾಶನ ಮೊತ್ತ 2500 ರೂ.ಗೆ ಹೆಚ್ಚಳರಾಜ್ಯದ ಸರ್ಕಾರಿ ಕಾಮಗಾರಿಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ : ಸಿಎಂ ಸಿದ್ದರಾಮಯ್ಯ ಘೋಷಣೆKarnataka Budget 2025: ತೊಗರಿ ಬೆಳೆಗಾರರಿಗೆ ಬಂಪರ್ ಗಿಫ್ಟ್ : ರಾಜ್ಯ ಸರ್ಕಾರದಿಂದ ‘ಪ್ರೋತ್ಸಾಹ ಧನ’ ಘೋಷಣೆಗುಡ್ ನ್ಯೂಸ್ : ‘ಗೃಹಲಕ್ಷ್ಮಿ’ ಯೋಜನೆ ಅಕ್ಕ ಕೋ ಆಪರೇಟಿವ್ ಸೊಸೈಟಿ ವ್ಯಾಪ್ತಿಗೆ.!Karnataka Budget 2025: ನಕ್ಸಲ್‌ ಪೀಡಿತ ಪ್ರದೇಶಗಳ ಅಭಿವೃದ್ಧಿಗೆ "ಪ್ಯಾಕೇಜ್‌'Karnataka Budget 2025: ಮೈಸೂರು, ಕಲಬುರಗಿಯಲ್ಲಿ ನಿಮ್ನಾನ್ಸ್‌, ಕೊಪ್ಪಳದಲ್ಲಿ ಮಲ್ಟಿಸ್ಬೆಹಾಲಿಟಿ ಆಸ್ಪತ್ರೆಗೆ ಸಿಎಂ ಗ್ರೀನ್‌ ಸಿಗ್ನಲ್Karnataka Budget 2025: ಮದ್ಯ ಪ್ರಿಯರಿಗೆ ಬಿಗ್‌ ಶಾಕ್‌ -ಮದ್ಯದ ದರ ಮತ್ತಷ್ಟು ದುಬಾರಿKarnataka Budget 2025: ಸಿನಿಪ್ರಿಯರಿಗೆ ಗುಡ್ ನ್ಯೂಸ್- ಕನ್ನಡ ಸಿನಿಮಾಗಳಿಗೆ ‘OTT’ ವೇದಿಕೆ ಸೃಷ್ಟಿಸಲು ನಿರ್ಧಾರ