LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತಿರುಪತಿ ಲಡ್ಡು ಪ್ರಕರಣ: ನಂದಿನಿ ಉತ್ಪನ್ನಗಳಿಗೆ ಬೇಡಿಕೆಯೋ ಬೇಡಿಕೆ!

ತಿರುಪತಿ ಲಡ್ಡು ವಿವಾದ ಪರೋಕ್ಷವಾಗಿ ಕರ್ನಾಟಕದ ಕೆಎಂಎಫ್​ನ ನಂದಿನಿ ಬ್ರ್ಯಾಂಡ್​​​ಗೆ ನೆರವಾಯಿತಾ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಇದೆ. ತಿರುಪತಿ ಲಡ್ಡು ವಿವಾದದ ಬಳಿಕ ನಂದಿನಿ ಹಾಲು ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ತಿರುಪತಿ ಲಡ್ಡು ವಿವಾದದ ಬೆನ್ನಲ್ಲೇ ಕರ್ನಾಟಕದ ಎಲ್ಲ ಮುಜರಾಯಿ ದೇಗುಲಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನೇ ಬಳಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಜತೆಗೆ, ಎಲ್ಲ ದೇಗುಲಗಳ ಪ್ರಸಾದವನ್ನು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಲೂ ಸೂಚನೆ ನೀಡಿತ್ತು. ಇದರಿಂದಾಗಿ ನಂದಿನಿ ಹಾಲು ಮತ್ತು ಹಾಲಿನ‌ ಉತ್ಪನ್ನಗಳ ಬೇಡಿಕೆ ಹೆಚ್ಚಳವಾಗಿದೆ.

ಮತ್ತೊಂದೆಡೆ, ಕಲಬೆರಕೆ ತುಪ್ಪ ಮತ್ತು ಹಾಲಿನ ಉತ್ಪನ್ನಗಳ ಆತಂಕದಿಂದಾಗಿ ಜನರಲ್ಲಿಯೂ ನಂದಿನಿ ಹಾಲು ಮತ್ತು ನಂದಿನಿ ಉತ್ಪನ್ನಗಳ ಮೇಲೆ ಒಲವು ಹೆಚ್ಚಾಗಿದೆ ಎಂದು ನಂದಿನಿ ಮೂಲಗಳು ತಿಳಿಸಿವೆ. ಸದ್ಯ ತಿರುಪತಿ ತಿರುಮಲ ದೇಗುಲ ಆಡಳಿತ ಮಂಡಳಿ ಕೂಡ ಲಡ್ಡು ತಯಾರಿಕೆಗಾಗಿ ನಂದಿನಿ ತುಪ್ಪವನ್ನೇ ಬಳಸುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!