LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೀವ್ರ ಜ್ವರದಿಂದ ಆಸ್ಪತ್ರೆಗೆ ದಾಖಲಾದ ಬಿಜೆಪಿ ಮಾಜಿ ಸಚಿವ ಸುರೇಶ್ ಕುಮಾರ್- ಐಸಿಯುನಲ್ಲಿ ಚಿಕಿತ್ಸೆ

ಬೆಂಗಳೂರು: ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಆಸ್ಪತ್ರೆಗೆ ದಾಖಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ಸುರೇಶ್ ಕುಮಾರ್ ಅವರನ್ನು ದಾಖಲಿಸಿದೆ. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

ಸುರೇಶ್ ಕುಮಾರ್ ಅವರಿಗೆ ಮೆದುಳಿಗೆ ಜ್ವರ ತಗುಲಿದೆ ಎನ್ನಲಾಗುತ್ತಿದೆ. ಕಳೆದ ತಿಂಗಳು ಬೆಂಗಳೂರಿನಿಂದ ತಿರುಪತಿಗೆ ಸೈಕಲ್ ಪ್ರಯಾಣ ಬೆಳೆಸಿದ್ದ ಸುರೇಶ್‌ಕುಮಾರ್ ಬಳಿಕ ದೋಸ್ತಿ ಪಾದಯಾತ್ರೆಯಲ್ಲೂ ಒಂದು ದಿನ ಭಾಗಿಯಾಗಿದ್ದರು. ಆದರೆ ಇದೀಗ ಕಳೆದ 3-4 ದಿನಗಳ ಹಿಂದೆ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದರು.

ನಿನ್ನೆ ರಾತ್ರಿ ಜ್ವರ ತೀವ್ರಗೊಂಡ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನ