LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತುಂಗಭದ್ರಾ ಜಲಾಶಯದ ಎಲ್ಲಾ 5 ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ ಮುರಿದಿದ್ದ 19ನೇ ಗೇಟ್‍ನಲ್ಲಿ ಎಲ್ಲಾ 5 ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿಯಾಗಿದೆ. ಇದೀಗ ಪೋಲಾಗುತ್ತಿದ್ದ ನೀರನ್ನು ಸಂಪೂರ್ಣವಾಗಿ ನಿಲ್ಲಿಸುವಲ್ಲಿ ತಜ್ಞರ ತಂಡ ಯಶಸ್ವಿಯಾಗಿದೆ.

ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ತಂಡ ಮೂರು ದಿನಗಳಿಂದ ಸ್ಟಾಪ್ ಲಾಗ್ ಗೇಟ್ ಅಳವಡಿಸುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿತ್ತು.ಅ.16 ರಂದು ಮೊದಲ ಎಲಿಮೆಂಟ್ ಅಳವಡಿಸಲಾಗಿತ್ತು. ಇದೀಗ ಶನಿವಾರ ಸಂಜೆ ಎಲ್ಲಾ ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ ಡ್ಯಾಂನಿಂದ ಹೊರ ಹೋಗುತ್ತಿದ್ದ ನೀರು ಸ್ಥಗಿತಗೊಂಡಿದೆ.

ಸದ್ಯ ಜಲಾಶಲಯದ ಎಲ್ಲ 33 ಗೇಟ್‍ಗಳನ್ನು ಮುಚ್ಚಲಾಗಿದೆ ಎಂದು ಟಿಬಿ ಡ್ಯಾಂ ಮಂಡಳಿ ತಿಳಿಸಿದೆ. ಈ ಸ್ಟಾಪ್ ಲಾಗ್ ಅಳವಡಿಕೆಯಿಂದಾಗಿ 70 ಟಿಎಂಸಿಯಷ್ಟು ನೀರು ಉಳಿಸಲು ಸಾಧ್ಯವಾಗಿದೆ. ಇನ್ನು ಆ ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಒಳ ಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಇದುವರೆಗೆ ಪೋಲಾದ ನೀರು ಮತ್ತೆ ತುಂಬಿಕೊಳ್ಳುವ ವಿಶ್ವಾಸ ಮೂಡಿದೆ. ಸದ್ಯ ಜಲಾಶಯಕ್ಕೆ 41 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಡ್ಯಾಂ ತಜ್ಞ ಕನ್ನಯ್ಯ ನಾಯ್ಡು ಮಾತನಾಡಿ, ರೈತರ ಬದುಕು ಹಸನುಗೊಳಿಸಲು ನಾನು ಈ ಇಳಿವಯಸ್ಸಿನಲ್ಲೂ ದೂರದ ಹೈದರಾಬಾದ್‍ನಿಂದ ಆಗಮಿಸಿ ಸ್ಟಾಪ್ ಲಾಗ್ ಗೇಟ್ ಅಳವಡಿಸಿರುವೆ. ಹರಿಯುವ ನೀರಿನಲ್ಲೇ ಗೇಟ್ ಅಳವಡಿಕೆ ಸವಾಲಿನ ಕೆಲಸ ಆಗಿತ್ತು. ಆದರೂ ನಮ್ಮ ಮನೆ ದೇವರಾದ ತಿರುಪತಿ ತಿಮ್ಮಪ್ಪನ ಆಶೀರ್ವಾದದಿಂದ ಯಶಸ್ಸು ಸಾಧಿಸಿದ್ದೇವೆ. ನನಗೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ ಎಂದರು.

 

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮ್ಯಾಜಿಕ್‌ ಮಶ್ರೂಮ್‌ ಮಾದಕ ದ್ರವ್ಯ ಎಂದು ಪರಿಗಣಿಸಲಾಗದು: ಹೈಕೋರ್ಟ್‌1 ಕೋಟಿಗೂ ಅಧಿಕ ವಂಚನೆ: ಐಶ್ವರ್ಯಗೌಡ, ಪತಿ ಸೇರಿ 7 ಮಂದಿ ವಿರುದ್ಧ ಎಫ್‌ಐಆರ್ ದಾಖಲು..!ಸೈಫ್ ಅಲಿ ಖಾನ್ ಪ್ರಕರಣ - ಮತ್ತೋರ್ವ ಆರೋಪಿಯ ಬಂಧನಟೀಂ ಇಂಡಿಯಾ ಪ್ರಕಟ – ರೋಹಿತ್‌ ಶರ್ಮಾಗೆ ನಾಯಕತ್ವದ ಹೊಣೆಪೊಲೀಸರ ಸೋಗಿನಲ್ಲಿ ಕಂಟ್ರ್ಯಾಕ್ಟರ್‌ಗೆ ಹನಿಟ್ರ್ಯಾಪ್ ನಯನಾ ಸೇರಿ 4 ಜನರ ಬಂಧನ'ಸಿದ್ದರಾಮಯ್ಯನವರು ಅತಿಹೆಚ್ಚು ಭ್ರಷ್ಟಾಚಾರ ಮಾಡಿದ ಸಿಎಂ' - ಜನಾರ್ದನ ರೆಡ್ಡಿಮೂವರು ಪ್ರಾಣ ಸ್ನೇಹಿತರು ಜೊತೆಗೆ UPSC ಪರೀಕ್ಷೆ ಬರೆದು ಐಎಎಸ್-ಐಪಿಎಸ್‌ ಅಧಿಕಾರಿಗಳಾದ ಕಥೆಅನಾನಸ್‌ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆಇನ್ಮುಂದೆ ಜಿಲ್ಲಾ ಆಸ್ಪತ್ರೆಯಲ್ಲೇ ಕೃತಕ ಕೀಲು ಬದಲಾವಣೆ ಶಸ್ತçಚಿಕಿತ್ಸೆಮನೆಯಲ್ಲಿ ಇಂತಹ ಲಕ್ಷಣಗಳು ಕಂಡು ಬಂದರೆ ದಾರಿದ್ರ ದೌರ್ಭಾಗ್ಯ ಗ್ಯಾರಂಟಿ ಇವತ್ತೇ ಎಚ್ಚರಗೊಳ್ಳಿ?