ತೋಟಗಾರಿಕೆ ಬೆಳೆ ಬೆಳೆಯಲು ರೈತರಿಂದ ಅರ್ಜಿ ಆಹ್ವಾನ
ದಾವಣಗೆರೆ: ರಾಷ್ಟ್ರೀಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ, 2025-26 ನೇ ಸಾಲಿನಲ್ಲಿ ಜಿಲ್ಲೆಯ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ರೈತರು ಅಗತ್ಯ ದಾಖಲಾತಿಗಳೊಂದಿಗೆ ಪಹಣಿ,ಆಧಾರ್, ಉದ್ಯೋಗ ಚೀಟಿ, ಸಣ್ಣ ಮತ್ತು ಅತೀ ಸಣ್ಣ ರೈತರ ಪ್ರಮಾಣ ಪತ್ರ, ಪರಿಶಿಷ್ಟ ಜಾತಿ, ಪಂಗಡದವರಾಗಿದ್ದಲ್ಲಿ ಜಾತಿ ಪ್ರಮಾಣ ಪತ್ರದೊಂದಿಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೆÉೀರಿ, ಹೊನ್ನಾಳಿ ಅಥವಾ ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.