LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದರ್ಶನ್​ಗೆ ರಾಜಾತಿಥ್ಯ ನೀಡಿದ್ದ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಪರಪ್ಪ ಅಗ್ರಹಾರ ಜೈಲು ಸೇರಿದ್ದ ದರ್ಶನ್​ಗೆ ರಾಜಾತಿಥ್ಯ ನೀಡಿರುವ ಕುರಿತು ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.

ರೌಡಿಗಳ ಜೊತೆ ಕುಳಿತು ಸಿಗರೇಟ್ ಸೇದುತ್ತಿದ್ದ ದರ್ಶನ್ ಫೋಟೋ ಜೈಲಿನ ಕರ್ಮಕಾಂಡವನ್ನ ಹೊರತಂದಿತ್ತು. ಇದೇ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದು, ಜೈಲಿನ ಮೇಲೆ ನಿನ್ನೆ ಮತ್ತೊಮ್ಮೆ ದಾಳಿ ನಡೆಸಿದ್ದಾರೆ.

ಈ ದಾಳಿ ವೇಳೆ ವಿಲ್ಸನ್ ಗಾರ್ಡನ್ ನಾಗನ ಬಳಿ ಇದ್ದ ಮೊಬೈಲ್ ಸೇರಿದಂತೆ ಸುಮಾರು 18 ಮೊಬೈಲ್ ಸೀಜ್ ಆಗಿದೆ. ಡ್ರಗ್ಸ್ ಮತ್ತು ಹಣ ಕೂಡ ಸಿಕ್ಕಿದೆ. ಆತನ ಮೇಲೆ ಕಣ್ಣಿಟ್ಟಿದ್ದ ಸಿಸಿಬಿ ತಂಡ ಆತನ ಮೊಬೈಲ್ ಸೀಜ್ ಮಾಡಿ ಮತ್ತೆ ಈ ರೀತಿ ಚಟುವಟಿಕೆಯಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದಾರೆ.

ದಾಳಿ ವೇಳೆ 1.3 ಲಕ್ಷ ಮೌಲ್ಯದ ಸ್ಯಾಮ್‌ಸಂಗ್ ಫೋನ್​ಗಳು, ಏಳು ಎಲೆಕ್ಟ್ರಿಕ್ ಸ್ಟವ್‌ಗಳು, ಐದು ಚಾಕುಗಳು, ಮೂರು ಮೊಬೈಲ್ ಫೋನ್ ಚಾರ್ಜರ್‌ಗಳು, ಎರಡು ಪೆನ್ ಡ್ರೈವ್‌ಗಳು, 36,000 ರೂಪಾಯಿ ನಗದು, ಸಿಗರೇಟ್, ಬೀಡಿ ಮತ್ತು ಬೆಂಕಿಕಡ್ಡಿ ಬಾಕ್ಸ್‌ಗಳು ಸೇರಿದಂತೆ 15 ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿ