LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದರ್ಶನ್ & ಟೀಮ್ ಹಿಂಡಲಗಾ ಜೈಲಿಗೆ ಶಿಫ್ಟ್ ಬಹುತೇಕ ಫಿಕ್ಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ & ಟೀಂ ಅನ್ನು ಹಿಂಡಲಗಾ ಜೈಲಿಗೆ ಶಿಫ್ಟ್ ಮಾಡುವುದು ಬಹುತೇಕ ಫಿಕ್ಸ್ ಆಗಿದೆ. ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ರೌಡಿಶೀಟರ್ ಜೊತೆಗೆ ಹರಟೆ ಹೊಡೆಯುತ್ತಾ ಹಾಯಾಗಿ ಕುಳಿತ ಫೋಟೋ ವೈರಲ್ ಬೆನ್ನಲ್ಲೇ, ವಿಡಿಯೋ ಕಾಲ್ ದೃಶ್ಯದ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ದರ್ಶನ್ & ಗ್ಯಾಂಗ್‌ಅನ್ನು ಬೇರೆ ಬೇರೆ ಜೈಲುಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ಸಹ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಆರೋಪಿಗಳನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಅಟ್ಟುವ ಪ್ರಕ್ರಿಯೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ. ಈಗಾಗಲೇ ಬೆಂಗಳೂರು ಪೊಲೀಸರು ಕೋಕಾ ಕಾಯ್ದೆಯಡಿ ಇರುವವರನ್ನ ಶಿಫ್ಟ್ ಮಾಡಲು ಪತ್ರ ಬರೆದಿದ್ದರು. ಈಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಸೇರಿದಂತೆ 26 ಆರೋಪಿಗಳ ಶಿಫ್ಟ್‌ ಮಾಡಲಾಗುತ್ತಿದೆ. ಆದರೆ ಕಾನೂನು ವಿಚಾರವಾಗಿ ಜೈಲು ಅಧಿಕಾರಿಗಳು ಚರ್ಚೆ ಮಾಡುತ್ತಿದ್ದಾರೆ. ನ್ಯಾಯಾಲಯದ ಅನುಮತಿ ಬೇಕಾ ಅಥವಾ ಜೈಲು ಆಡಳಿತವೇ ನಿರ್ಧರಿಸಬಹುದಾ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ಜೈಲು ಆಡಳಿತವೇ ನಿರ್ಧಾರ ತೆಗೆದುಕೊಳ್ಳಬಹುದು ಎಂದಾರೆ ಇಂದೇ ಶಿಫ್ಟ್ ಸಾಧ್ಯತೆ ಇದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಿಮ್ಮ ಮನೆಯಲ್ಲಿ ಇಂತಹ ಸಂಕೇತಗಳು ಕಂಡುಬಂದರೆ ಅದು ಮಾಟ ಮಂತ್ರದ ಪ್ರಭಾವ..!ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರ