LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಳಪತಿಗಳಿಗೆ ಮತ್ತೊಂದು ಶಾಕ್!: ಜೆಡಿಎಸ್ ಶಾಸಕರು‌ ಕೈ ಸಂಪರ್ಕದಲ್ಲಿ..? ಈ ಬಗ್ಗೆ ಡಿಕೆಶಿ ನೀಡಿದ ಪ್ರತಿಕ್ರಿಯೆ ಏನು?

ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರ ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ ರೇವಣ್ಣ ಅವರ ಪೆನ್‌ ಡ್ರೈವ್‌ ಪ್ರಕರಣ ಜೆಡಿಎಸ್‌ ಪಕ್ಷಕ್ಕೆ ತೀವ್ರ ಮುಜುಗರವನ್ನುಂಟು ಮಾಡಿದೆ. ಹೀಗಾಗಿ ಜೆಡಿಎಸ್‌ ಪಕ್ಷದ 12 ಜನ ಶಾಸಕರು ಕಾಂಗ್ರೆಸ್‌ ಸೇರುತ್ತಾರೆ ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ.

ಈ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್‌ ಅವರು ಮಾತನಾಡಿದ ಅವರು, ನನ್ನ ಜತೆ ಯಾರೊಬ್ಬರೂ ಸಂಪರ್ಕದಲ್ಲಿಲ್ಲ. ನಾನು ಯಾರ ಜತೆಯೂ ಮಾತುಕತೆ ನಡೆಸಿಲ್ಲ. ಸುಮ್ಮನೆ ಊಹಾಪೋಹಾ ಸುದ್ದಿಗಳನ್ನು ಹರಡಿಸುತ್ತಿದ್ದಾರೆ. ಎಂತಹವರಾದರೂ ಈ ವಿಚಾರದಲ್ಲಿ ಹತಾಶರಾಗಿರುತ್ತಾರೆ. ಅವರ ಪಕ್ಷದಲ್ಲಿ ಹಾಗೂ ಕುಟುಂಬದಲ್ಲಿನ ಆಂತರಿಕ ಸಮಸ್ಯೆಗಳು ಎಲ್ಲರಿಗೂ ಗೊತ್ತಿದೆ. ಈಗ ನಾನು ಆ ಬಗ್ಗೆ ಚರ್ಚೆ ಮಾಡುವುದಿಲ್ಲ.

ವಿಧಾನಸಭೆ ಚುನಾವಣೆ ಟಿಕೆಟ್ ಹಂಚಿಕೆ ಮಾಡುವ ಸಮಯದಿಂದಲೂ ಅವರ ಕುಟುಂಬದವರ ಹೇಳಿಕೆಗಳನ್ನು ಗಮನಿಸಿಕೊಂಡು ಬನ್ನಿ. ಅವರು ಬಿಜೆಪಿ ಜತೆ ಮೈತ್ರಿಯಾದರೂ ಮಾಡಿಕೊಳ್ಳಲಿ, ಪಕ್ಷವನ್ನು ವಿಲೀನವಾದರೂ ಮಾಡಿಕೊಳ್ಳಲಿ, ಅದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೊಡೆದಾಡಿಕೊಂಡು ಠಾಣೆ ಮೆಟ್ಟಿಲೇರಿದ ಬಿಗ್‌ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ದಂಪತಿವರ್ಧಮಾನ್‌ ಗ್ರೂಪ್‌ ಎಂಡಿಗೆ 7 ಕೋಟಿ ರೂ. ವಂಚಿಸಿದ ಸೈಬರ್‌ ಖದೀಮರುಗೃಹಲಕ್ಷ್ಮಿ ಯರಿಗೆ ಬಾರದ 2 ಸಾವಿರ: ಪ್ರಮುಖ ಕಾರಣ ಇಲ್ಲಿದೆಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ1.6 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳಲ್ಲಿ ಗಾಂಧಿ ಬದಲಿಗೆ ನಟ ಅನುಪಮ್ ಖೇರ್ ಭಾವಚಿತ್ರ.!ದೇವಸ್ಥಾನಗಳ ಅಡುಗೆ ಕೋಣೆ, ಉಗ್ರಾಣಗಳಲ್ಲಿ ಸಿಸಿಟಿವಿ ಕಡ್ಡಾಯಸೌದಿ ಅರೇಬಿಯಾದಲ್ಲಿ ಪ್ಯಾಲೆಸ್ತೀನ್‌ಗಾಗಿ ಪ್ರಾರ್ಥನೆ ನಿಷೇಧ..!ಮುಡಾ ಪ್ರಕರಣ: ಇಂದಿನಿಂದ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ಆರಂಭನಿಮ್ಮ ಮಕ್ಕಳು ತುಂಬಾ ಮಂಕು ಇದ್ರೆ ಓದಲ್ಲ ಮತ್ತು ಹೇಳಿದ ಮಾತು ಕೇಳೋದಿಲ್ಲ ಅಂದರೆ ಹೀಗೆ ಮಾಡಿರಿಹೀಗೆ ಒಮ್ಮೆ ಟ್ರೈ ಮಾಡಿ ಪೆಪ್ಪರ್ ಚಿಕನ್..!