LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಶಕಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿ

ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ.

ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು.

ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ ‘ತಬರನ ಕತೆ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ‘ನಾನು ಅವನಲ್ಲ ಅವಳು’ ಸಿನಿಮಾದ ಅತ್ಯುತ್ತಮ ನಟನೆಗೆ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ಇನ್ಯಾವುದೇ ಕನ್ನಡದ ನಟರಿಗೆ ರಾಷ್ಟ್ರಪ್ರಶಸ್ತಿ ದೊರೆತಿರಲಿಲ್ಲ. ಇದೀಗ ಆ ಬಹು ಸಮಯದ ಬರವನ್ನು ರಿಷಬ್ ಶೆಟ್ಟಿ ನೀಗಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 BBK 11 ಫಿನಾಲೆ ಆರಂಭಕ್ಕೂ ಮುನ್ನವೇ ದೊಡ್ಮನೆಯಿಂದ ರಜತ್ ಔಟ್‌.!ಆನ್ ಲೈನ್ ಗೇಮ್ ನಿಂದ 13 ಲಕ್ಷ ಸಾಲ : `ಡೆತ್ ನೋಟ್’ ಬರೆದಿಟ್ಟು ಮನೆ ಬಿಟ್ಟು ಹೋದ ಯುವಕಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಅಂಕುಶ- ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು- ಬೆಂಕಿಯ ಕೆನ್ನಾಲಿಗೆ ನೂರಾರು ಅರಣ್ಯ ನಾಶಜಿಲ್ಲಾ ಆಸ್ಪತ್ರೆ ಮಕ್ಕಳ ತಜ್ಞ ಕಿಡ್ನಾಪ್ 3 ಕೋಟಿಗೆ ಡಿಮ್ಯಾಂಡ್:ಅಪಹರಣಕಾರರ ಪತ್ತೆಗೆ ಬಲೆಮದುವೆಗೆ ಕೆಲ ದಿನ ಇರುವಾಗಲೇ ಯುವಕ ಆತ್ಮಹತ್ಯೆರಾಜ್ಯದ 17 ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧಬೆಳ್ಳಂಬೆಳಗ್ಗೆ ಮಹಾಕುಂಭ ಮೇಳದಲ್ಲಿ ಅಗ್ನಿ ಅವಘಡ : 2 ಕಾರುಗಳು ಸುಟ್ಟು ಭಸ್ಮ.!ಸಂಸದ ವಿಜಯಸಾಯಿ ರಾಜ್ಯಸಭೆಗೆ ರಾಜೀನಾಮೆಮುಂಬೈ ದಾಳಿ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಸಮ್ಮತಿಸಿದ ಅಮೆರಿಕ ಸುಪ್ರೀಂ ಕೋರ್ಟ್