LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಸಂಸದ ಗೋವಿಂದ ಎಂ ಕಾರಜೋಳ.!

ಚಿತ್ರದುರ್ಗ : ಭರಮಸಾಗರ-ಚಿತ್ರದುರ್ಗ ಮಧ್ಯದ 29 ಕಿ.ಮೀ ಉದ್ದದ ರೈಲ್ವೇ ಭೂಸ್ವಾಧೀನ ಪ್ರಕ್ರಿಯೆ ಶೇ.90 ರಷ್ಟು ಮುಕ್ತಾಯಗೊಂಡಿದ್ದು, ಭೂಮಿ ಹಸ್ತಾಂತರ ಮಾಡಲಾಗಿದೆ. ಕಾಮಗಾರಿಯ ಟೆಂಡೆರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಶೀಘ್ರವೇ ರಾಜ್ಯದವರೇ ಆದ ರೈಲ್ವೇ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರಿಂದ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸಂಸದ ಗೋವಿಂದ ಎಂ ಕಾರಜೋಳ ರೈಲ್ವೇ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ರೈಲ್ವೇ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.

ದಾವಣಗೆರೆ-ಚಿತ್ರದುರ್ಗ-ತುಮಕೂರು ನೇರ ರೈಲ್ವೇ ಯೋಜನೆ ಜಿಲ್ಲೆ ಅಗತ್ಯವಾಗಿದೆ. ಯೋಜನೆಗೆ ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ಒಟ್ಟು 1210 ಎಕೆರೆ ಭೂಮಿ ಅವಶ್ಯಕವಾಗಿದೆ. ಇದರಲ್ಲಿ 1053 ಎಕರೆ ಭೂಮಿ ಸ್ವಾಧೀನ ಪಡಿಸಿಕೊಂಡು ರೈಲ್ವೇ ಇಲಾಖೆ ನೀಡಲಾಗಿದೆ. ಬಾಕಿ ಇರುವ 145 ಎಕರೆ ಭೂ ಸ್ವಾಧೀನ ಪ್ರಕ್ರಿಯ ಅಂತಿಮ ಹಂತದಲ್ಲಿದೆ. ಯೋಜನೆ ವಿಳಂಭವಾಗದAತೆ ರೈಲ್ವೇ ಕಾಮಗಾರಿಗೆ ಅಗತ್ಯ ಇರುವ ಭೂಮಿ ಸ್ವಾಧೀನ ಹಾಗೂ ರೈಲ್ವೇ ಇಲಾಖೆಗೆ ಭೂಮಿ ಹಸ್ತಾಂತರಿಸುವ ಪ್ರಕ್ರಿಯೆಯನ್ನು ತ್ವರಿತವಾಗಿ ಮಾಡುವಂತೆ ಸಂಸದ ಗೋವಿಂದ ಎಂ ಕಾರಜೋಳ ಭೂಸ್ವಾಧೀನಾಧಿಕಾರಿಗಳಿಗೆ ಸೂಚಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RSS ನೋಂದಣಿ ಯಾಕಾಗಿಲ್ಲ? ಖಡಕ್​ ಉತ್ತರ ಕೊಟ್ರು ಮೋಹನ್ ಭಾಗವತ್ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್