LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿಗೆ ನೀರು ಒದಗಿಸುವಂತೆ ಉಪವಾಸ ಸತ್ಯಾಗ್ರಹ - ದೆಹಲಿ ಸಚಿವೆ ಆಸ್ಪತ್ರೆಗೆ ದಾಖಲು

ನವದೆಹಲಿ : ದೆಹಲಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ಭೋಗಲ್​ನಲ್ಲಿ ಕಳೆದ ನಾಲ್ಕು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ದೆಹಲಿ ಸಚಿವೆ ಅತಿಶಿ ಆರೋಗ್ಯ ಹೆದಗೆಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್​ಎನ್​ಜೆಪಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಪವಾಸ ಸತ್ಯಾಗ್ರಹದ ನಾಲ್ಕನೇ ದಿನವಾದ ಸೋಮವಾರ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದರು. ಆರೋಗ್ಯ ಕ್ಷೀಣಿಸುತ್ತಿರುವುದನ್ನು ಕಂಡ ವೈದ್ಯರು ಆಸ್ಪತ್ರೆಗೆ ದಾಖಲಾಗುವಂತೆ ಸಲಹೆ ನೀಡಿದ್ದರು, ಆದರೂ ಅವರು ನಿರಾಕರಿಸಿದ್ದರು. ಸೋಮವಾರ ರಾತ್ರಿ ಅವರ ರಕ್ತದಲ್ಲಿರುವ ಸಕ್ಕರೆ ಪ್ರಮಾಣ 43ಕ್ಕೆ ಕುಸಿದಿತ್ತು, ಮಂಗಳವಾರ ಬೆಳಗಿನ ಜಾವ 36ಕ್ಕೆ ಕುಸಿದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಐದು ದಿನಗಳಿಂದ ಅವರು ಏನನ್ನೂ ತಿಂದಿಲ್ಲ, ಹರ್ಯಾಣದಿಂದ ದೆಹಲಿಯ ಪಾಲಿನ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ದೆಹಲಿಯು ನೀರಿನ ಕೊರತೆಯನ್ನು ಎದುರಿಸುತ್ತಿರುವಾಗ, ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರವು ದಿನಕ್ಕೆ 100 ಮಿಲಿಯನ್ ಗ್ಯಾಲನ್ (ಎಂಜಿಡಿ) ನೀರನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಅತಿಶಿ ಆರೋಪಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!