LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ..! 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಿ 30 ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ. ಮಹಾಲಕ್ಷ್ಮಿ (29) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. 2-3 ತಿಂಗಳಿನಿಂದ ಮಹಿಳೆ ಮನೆಯಲ್ಲಿ ಬಾಡಿಗೆಗಿದ್ದರು. ಇಂದು ಸಂಬಂಧಿಕರು ಬೀಗ ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು ಎಂದು ತಿಳಿದುಬಂದಿದೆ.ಆದರೆ ಪಿಕಪ್‌ ಡ್ರಾಪ್‌ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆಬಿರಿಯಾನಿ, ಚಿಕನ್ ಫ್ರೈಗೆ ಬೇಡಿಕೆಯಿಟ್ಟ ಮಗುವಿನ ವಿಡಿಯೋ ವೈರಲ್; ಅಂಗನವಾಡಿ ಮೆನು ಬದಲಾವಣೆ ಸಾಧ್ಯತೆಕುಂಭ ಮೇಳ ಕಾಲ್ತುಳಿತ : ಮೃತಪಟ್ಟವರ ಬಗ್ಗೆ ಸರಿಯಾದ ಮಾಹಿತಿ ನೀಡುತ್ತಿಲ್ಲವೇಕೆ?: ಅಖಿಲೇಶ್ ಯಾದವ್ ಪ್ರಶ್ನೆ