LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿ: ಪ್ರಾರ್ಥನೆ ವೇಳೆ ಚರ್ಚ್ ಮೇಲೆ ಹಿಂದೂ ಸಂಘಟನೆ ದಾಳಿ - ಓರ್ವನ ಬಂಧನ

ನವದೆಹಲಿ: ದೆಹಲಿಯ ಚರ್ಚ್ ನಲ್ಲಿ ಪ್ರಾರ್ಥನೆ ನಡೆಸುತ್ತಿದ್ದ ವೇಳೆ ಹಿಂದೂ ಸಂಘಟನೆಯ ಸದಸ್ಯರು ಚರ್ಚ್ ಗೆ ನುಗ್ಗಿ ದಾಂಧಲೆ ನಡೆಸಿ ಘೋಷಣೆಗಳನ್ನು ಕೂಗಿದ ಘಟನೆಗೆ ಸಂಬಂಧಿಸಿದಂತೆ ಆರೋಪಿ ಹಿಂದೂ ಸಂಘಟನೆಯ ಮುಖಂಡರೊಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ದೆಹಲಿಯ ತಾಹಿರ್‌ಪುರದಲ್ಲಿರುವ ಸಿಯೋನ್ ಪ್ರಾರ್ಥನಾ ಭವನದಲ್ಲಿ ಭಾನುವಾರ ಬೆಳಗ್ಗೆ 10 ಗಂಟೆ ವೇಳೆಗೆ ಪ್ರಾರ್ಥನೆ ನಡೆಸುತ್ತಿದ್ದಾಗ ಕೆಲ ಹಿಂದೂ ಸಂಘಟನೆಗಳ ಸದಸ್ಯರು ಚರ್ಚ್‍ಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಮತ್ತು ಆವರಣದೊಳಗೆ ಘೋಷಣೆಗಳನ್ನು ಕೂಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಆರೋಪಿಸಲಾಗಿದೆ.

ಪ್ರಾರ್ಥನೆಯ ನೆಪದಲ್ಲಿ ಹಿಂದೂ ಧರ್ಮದ ಬಗ್ಗೆ ಆಕ್ಷೇಪಾರ್ಹ ಭಾಷೆ ಬಳಸಲಾಗಿದೆ ಎಂದು ದಾಳಿಯಲ್ಲಿ ಭಾಗಿಯಾಗಿರುವ ಹಿಂದೂ ಸಂಘಟನೆಗಳು ಆರೋಪಿಸಿವೆ. ಘಟನೆಯಲ್ಲಿ ಒಬ್ಬ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚರ್ಚ್‍ನಲ್ಲಿ ಗಲಾಟೆ ಸೃಷ್ಟಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚರ್ಚ್‍ನಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂಬಿಕೆ ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ - ರಾಜ್ಯ ಬಿಜೆಪಿ ನಾಯಕರಿಂದ ಆಕ್ರೋಶಗೃಹಲಕ್ಷ್ಮಿ ಯೋಜನೆಯ ನಾಲ್ಕನೇ ಕಂತಿನ ಹಣ ಬಿಡುಗಡೆ ಇದ್ದರು ಸಹ ವರ್ಗಾವಣೆಯಾಗಿಲ್ಲವೆ? ಇಲ್ಲಿದೆ ಅದರ ಪೂರ್ತಿ ವಿವರಮಕ್ಕಳು ಹೂ ಕಿತ್ತರೆಂದು ಅಂಗನವಾಡಿ ಶಿಕ್ಷಕಿಯ ಮೂಗು ಕತ್ತರಿಸಿದ ವ್ಯಕ್ತಿರಾಮಮಂದಿರ ಲೋಕಾರ್ಪಣೆ ವೇಳೆ ಹಳೇ ಕೇಸ್ ಹುಡುಕಿ ಜೈಲಿಗೆ ಹಾಕುವ ಕೆಲಸ ಹೆಮ್ಮೆ ತರುತ್ತಾ?’; ಕೋಟಾಬಿಜೆಪಿ ತೊರೆದ ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಶಾಂತಾ ವೈಎಸ್​ಆರ್ ಸಿಗೆ ಸೇರ್ಪಡೆಮೂರನೇ ಸಮನ್ಸ್‌ಗೂ ಕ್ಯಾರೇ ಎನ್ನದ ಕ್ರೇಜಿವಾಲ್‌, ಇದು ಬಂಧಿಸುವ ಸಂಚು- ಎಎಪಿಪ್ರವಾಸಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ; 14 ಮಂದಿ ಸಾವು, ಹಲವರಿಗೆ ಗಾಯ