E-PAPER
17 Nov 2026, 12:24:18 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಕಾಂಗ್ರೆಸ್ ಯತ್ನ - ಸುಭಾಷ್ ಪಾಟೀಲ

ಬೆಳಗಾವಿ-03:ನಗರದಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಮಾತನಾಡಿ
ದೇಶದಲ್ಲಿ ಸಂವಿಧಾನ ಬಾಹಿರ ಹಾಗೂ ಕಾನೂನು ಬಾಹಿರ ಚಟುವಟಿಕೆಗಳ ಮೂಲಕ ಅಶಾಂತಿ ಮತ್ತು ಹಿಂಸೆಯನ್ನು ಪ್ರಚೋದಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರು ಪ್ರಯತ್ನಿಸುತ್ತಿದ್ದಾರೆ ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸದೃಢವಾಗಿದ್ದು, ಜನರು ಜಾಗೃತರಾಗಿದ್ದಾರೆ. ಆದರೆ ಅಧಿಕಾರ ಕಳೆದುಕೊಂಡ ಹತಾಶೆಯಿಂದ ಕಾಂಗ್ರೆಸ್ ದೇಶದ ಹಿತಾಸಕ್ತಿಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿದೆ
ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯಗಳನ್ನು ಈಡೇರಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ. ಆದರೆ ಕಾಂಗ್ರೆಸ್ ಪಕ್ಷದ ನಾಯಕರು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ಕೆಲವು ನಾಯಕರು ವಿದೇಶಿ ಶಕ್ತಿಗಳ ಪ್ರಭಾವಕ್ಕೆ ಒಳಗಾಗಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದ್ದಾರೆ
ಇವಿಎಂ, ಚುನಾವಣಾ ಆಯೋಗ, ಸುಪ್ರೀಂ ಕೋರ್ಟ್, ಸಿಬಿಐ ಸೇರಿದಂತೆ ಸಂವಿಧಾನಬದ್ಧ ಸಂಸ್ಥೆಗಳ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಚುನಾವಣೆಯಲ್ಲಿ ಸೋತಾಗ ಇವಿಎಂ ದೋಷಪೂರಿತ ಎಂದು ಆರೋಪಿಸುವ ಕಾಂಗ್ರೆಸ್ ನಾಯಕರು, ತಾವು ಗೆದ್ದಾಗ ಅದೇ ಇವಿಎಂ ವ್ಯವಸ್ಥೆಯನ್ನು ಸಮರ್ಥಿಸಿಕೊಳ್ಳುತ್ತಾರೆ ಎಂದು ಹೇಳಿದರು
ಮಾಜಿ ಶಾಸಕ ಸಂಜಯ ಪಾಟೀಲ ಮಾತನಾಡಿ ದೇಶದಲ್ಲಿ ಕಾನೂನುಬದ್ಧವಾಗಿ ಹೋರಾಟ ನಡೆಸಲು ಮತ್ತು ಸಂವಿಧಾನಾತ್ಮಕವಾಗಿ ಧ್ವನಿ ಎತ್ತಲು ಅವಕಾಶವಿದೆ. ಕಾಂಗ್ರೆಸ್‌ಗೆ ಯಾವುದೇ ಅನ್ಯಾಯವಾಗಿದ್ದರೆ ಸುಪ್ರೀಂ ಕೋರ್ಟ್ ಅಥವಾ ಚುನಾವಣಾ ಆಯೋಗದ ಮೊರೆ ಹೋಗಬಹುದು. ಆದರೆ ಸೂಕ್ತ ದಾಖಲೆಗಳಿಲ್ಲದೆ ‘ವೋಟ್ ಚೋರಿ’ ಹಾಗೂ ಎಸ್‌ಐಆರ್ ಪ್ರಕ್ರಿಯೆ ಸರಿಯಿಲ್ಲ ಎಂದು ಆರೋಪಿಸುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸಲಾಗುತ್ತಿದೆ. ಸುಪ್ರೀಂ ಕೋರ್ಟ್ ಹಾಗೂ ಪ್ರಧಾನಮಂತ್ರಿಯವರ ನಿವಾಸದ ಎದುರು ಧರಣಿ, ಮೆರವಣಿಗೆ ನಡೆಸುವುದು ಪ್ರಜಾಪ್ರಭುತ್ವದ ನಿಯಮಾವಳಿಗಳಿಗೆ ವಿರುದ್ಧವಾಗಿದೆ
ಮತದಾರರ ಪಟ್ಟಿ ಪರಿಷ್ಕರಣೆ ನಿರಂತರ ಪ್ರಕ್ರಿಯೆಯಾಗಿದ್ದು, ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರ ಹೆಸರುಗಳನ್ನು ತೆಗೆದುಹಾಕುವುದು ಸಹಜ. ನೈಜ ಮತದಾರರ ಹೆಸರು ಬಿಟ್ಟುಹೋಗಿದ್ದರೆ ಅದನ್ನು ಮರುಸೇರ್ಪಡೆ ಅಥವಾ ತಿದ್ದುಪಡಿ ಮಾಡಿಸಿಕೊಳ್ಳಲು ಅವಕಾಶವಿದೆ
ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ಹಾಗೂ ಫ್ರಾನ್ಸ್ ಸೇರಿದಂತೆ ವಿವಿಧ ದೇಶಗಳಲ್ಲಿ ಆಡಳಿತ ವ್ಯವಸ್ಥೆಯನ್ನು ಅಸ್ಥಿರಗೊಳಿಸಿದ ರೀತಿಯಲ್ಲೇ ಭಾರತದಲ್ಲಿಯೂ ಅಶಾಂತಿ ಸೃಷ್ಟಿಸಲು ವಿದೇಶಿ ಶಕ್ತಿಗಳೊಂದಿಗೆ ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳು ಪ್ರಯತ್ನಿಸುತ್ತಿವೆ ಎಂದು ಹೇಳಿದರು ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ,ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ್ ಮೊಹಿತೆ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ಈರಣ್ಣ ಅಂಗಡಿ,ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಸೋನಾಲಿ ಸರ್ನೊಬತ್ ಹಾಗೂ ಇತರರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.