LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧಾರ್ಮಿಕ ಕಾರ್ಯಕ್ರಮ:  ಕಾಲ್ತುಳಿತ ಸಂಭವಿಸಿ 27 ಜನ ಸಾವು.!

 

ಉತ್ತರಪ್ರದೇಶ: ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿ 27 ಜನ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಎಕ್ಸ್‌ ತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ.

ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ ಮೃತಪಟ್ಟಿದ್ದಾರೆ ಎಂದು ಹತ್ರಾಸ್ ಎಎಸ್‌ಪಿ ಮಾಹಿತಿ ನೀಡಿದ್ದಾರೆ.

ಈ ಘಟನೆ ಹತ್ರಾಸ್ ಜಿಲ್ಲೆಯ ಮೋಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆಯುತ್ತಿದ್ದ ಬಾಬಾ ಅವರ ಧಾರ್ಮಿಕ ಕಾರ್ಯಕ್ರಮದಲ್ಲಿ ನಡೆದಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳಿಗೆ ಇಥಹಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆ ಹೆಚ್ಚಾಗಬಹುದು ಎನ್ನಲಾಗಿದೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST