LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್

ಚೆನ್ನೈ : ನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ವಿಚಾರ ಬೆಳಕಿಗೆ ಬಂದಿದ್ದು, ಘಟನೆಗೆ ಸಮಬಂಧಿಸಿದಂತೆ 11 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಕೃಷ್ಣಗಿರಿಯಲ್ಲಿ ಈ ಘಟನೆ ನಡೆದಿದೆ. ಈ ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸರು, ಶಿಬಿರದ ಆಯೋಜಕರು, ಶಾಲೆಯ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಮತ್ತು ಓರ್ವ ವರದಿಗಾರ ಸೇರಿದಂತೆ 11 ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಖಾಸಗಿ ಶಾಲೆಯಲ್ಲಿ ಯಾವುದೇ ಎಸ್‌ಸಿಸಿ ಘಟಕವಿಲ್ಲ ಎಂಬುವುದಾಗಿ ತಿಳಿದುಬಂದಿದೆ.

ತಿಂಗಳ ಆರಂಭದಲ್ಲಿ ನಡೆದ ಮೂರು ದಿನಗಳ ಶಿಬಿರದಲ್ಲಿ 17 ಬಾಲಕಿಯರು ಸೇರಿದಂತೆ 41 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇವರಲ್ಲಿ ಕೆಲವು ವಿದ್ಯಾರ್ಥಿನಿಯರಿಗೆ ಆಮಿಷವೊಡ್ಡಿ ಸಭಾಂಗಣದಿಂದ ಹೊರಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂಬುವುದಾಗಿ ಬಾಲಕಿಯರು ಆರೋಪಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST