LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

 ನಗರದ ಎಲ್ಲಾ ಶಾಲಾ-ಕಾಲೇಜುಗಳಿಗೂ ಬೆಂಗಳೂರು ಹವಾಮಾನ ಕ್ರಿಯಾ ಬಳಗಗಳಿಗೆ ಸೇರಲು ಆಹ್ವಾನ: ಪ್ರೀತಿ ಗೆಹ್ಲೋಟ್

ಬೆಂಗಳೂರು:  ಬಿಬಿಎಂಪಿ ಹವಾಮಾನ ಕ್ರಿಯೆ ಕೋಶದ ಹೊಸ ಉಪಕ್ರಮ -ಬೆಂಗಳೂರು ಹವಾಮಾನ ಕ್ರಿಯಾ ಬಳಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯ ಹವಾಮಾನ ಕ್ರಿಯೆ ಕೋಶ, ನಗರದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಹವಾಮಾನ ಕ್ರಿಯೆಯ ಉದ್ದೇಶಗಳಿಗೆ ಒಗ್ಗೂಡಿಸುವ ಸಲುವಾಗಿ ಬೆಂಗಳೂರು ಹವಾಮಾನ ಕ್ರಿಯಾ ಬಳಗ ಕಾರ್ಯಕ್ರಮವನ್ನು ಆರಂಭಿಸಿದೆ.

ಈ ಯೋಜನೆಯು ವಿದ್ಯಾರ್ಥಿಗಳಲ್ಲಿ ಹವಾಮಾನ ಶಿಕ್ಷಣವನ್ನು ಬೋಧಿಸಿ, ಚಟುವಟಿಕೆಗಳ ಮೂಲಕ ಕೈಗೊಳ್ಳಬಹುದಾದ ಪರಿಸರ ಜಾಗೃತಿ ಮತ್ತು ಶಾಶ್ವತ ಅಭಿವೃದ್ಧಿಗೆ ದಾರಿ ನೀಡಲಿದೆ. ಶಾಲೆಗಳಲ್ಲಿನ ಹವಾಮಾನ ಕ್ರಿಯಾ ಬಳಗಗಳು ಬದಲಾವಣೆಗೆ ಪ್ರೇರಕ ಶಕ್ತಿಯಾಗಿದ್ದು, ವಿದ್ಯಾರ್ಥಿಗಳನ್ನು ಹಸಿರು ಸಂವೇದನಾಶೀಲ ನಾಗರಿಕರಾಗಿ ರೂಪಿಸುತ್ತವೆ.

ಈ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರ ಮಾರ್ಗದರ್ಶನ ಹಾಗೂ ಬೆಂಬಲದೊಂದಿಗೆ ಆರಂಭಗೊಂಡಿದ್ದು, ಬೆಂಗಳೂರು ನಗರದಲ್ಲಿನ ಎಲ್ಲಾ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಹವಾಮಾನ ಬದಲಾವಣೆಯ ಕುರಿತು ಅರಿವು ಮೂಡಿಸಿ, ನೈಜ ಕ್ರಮಗಳನ್ನು ಕೈಗೊಳ್ಳಲು ಪ್ರೇರೇಪಿಸುತ್ತದೆ.

2025ರ ಜೂನ್ 5ರ ವಿಶ್ವ ಪರಿಸರ ದಿನದಂದು, ಮೊದಲು ನೋಂದಾಯಿಸಿದ ಶಾಲೆಗಳಿಗೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಿಂದ ಪ್ರಶಸ್ತಿ ಹಾಗೂ ಗುರುತಿನ ಪತ್ರ ನೀಡಲಾಗುವುದು. ಮೊದಲ ಹಂತದಲ್ಲಿ 100 ಶಾಲೆಗಳ ನೋಂದಣಿಗೆ ಗುರಿಯಾಗಿದ್ದು, ಮುಂದಿನ ಹಂತಗಳಲ್ಲಿ 6000ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳನ್ನು ಒಳಗೊಳ್ಳಲು ಉದ್ದೇಶವಾಗಿದೆ.

ಬಿಬಿಎಂಪಿ ಹವಾಮಾನ ಕ್ರಿಯೆ ಕೋಶವು ನಗರದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಈ ಪ್ರಮುಖ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದೆ. ಬೆಂಗಳೂರು ಹವಾಮಾನ ಕ್ರಿಯಾ ಬಳಗದಲ್ಲಿ ಸದಸ್ಯರಾಗಲು ಇಂದೇ ನೊಂದಾಯಿಸಿಕೊಳ್ಳಲು ಭೇಟಿ ನೀಡಿ https://bengaluruclimateactionclubs.in
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ