LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟ ದರ್ಶನ್‌ಗೆ ಜಾಮೀನು: ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ!

ಬೆಂಗಳೂರು: ರೇಣುಕಾಸ್ವಾಮಿ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಇತ್ತ ಮಧ್ಯಂತರ ಜಾಮೀನು ಸಿಕ್ಕಿದ್ದು, ಅತ್ತ ರೇಣುಕಾಸ್ವಾಮಿ ಕುಟುಂಬಸ್ಥರು ಮನೆ ದೇವರ ಮೊರೆ ಹೋಗಿದ್ದಾರೆ. ಕುರುವತ್ತಿ ಬಸವೇಶ್ವರ ದೇವಸ್ಥಾನಕ್ಕೆ ತೆರಳಿದ್ದಾರೆ.

ಮಗ ರೇಣುಕಾಸ್ವಾಮಿ ಕೊಲೆ ಕೇಸ್ನಿಂದ ನೊಂದಿದ್ದ ಕುಟುಂಬ ಮನಶಾಂತಿಗಾಗಿ ಹಾವೇರಿ ಜಿಲ್ಲೆಯ ಕುರುವತ್ತಿ ಬಸವೇಶ್ವರ ದೇವಾಲಯಕ್ಕೆ ತೆರಳಿದ್ದಾರೆ. ತಂದೆ ಶಿವನಗೌಡರ್, ತಾಯಿ ರತ್ನಪ್ರಭ, ಮಗಳು ಸುಚೇತ ಅವರು ದೇವರ ದರ್ಶನಕ್ಕೆ ಹೋಗಿದ್ದಾರೆ.

ರೇಣುಕಾಸ್ವಾಮಿ ಕೊಲೆಯ ಬಳಿಕ 6 ತಿಂಗಳಿಂದ ಕುಟುಂಬ ನೊಂದಿತ್ತು. ಇದ್ದ ಒಬ್ಬ ಮಗನನ್ನು ಹಂತಕರು ಕೊಲೆ ಮಾಡಿದ್ದು, ಇದರಿಂದ ಆಘಾತಕ್ಕೆ ಒಳಗಾಗಿತ್ತು. ಆದರಿಂದು ದರ್ಶನ್ಗೆ ಮಧ್ಯಂತರ ಜಾಮೀನಿನ ತೀರ್ಪಿನ ಸಮಯದಲ್ಲಿ ಮಾನಸಿಕ ನೆಮ್ಮದಿಗಾಗಿ ರೇಣುಕಾಸ್ವಾಮಿ ಕುಟುಂಬ ಮನೆ ದೇವರ ದರ್ಶನಕ್ಕೆ ತೆರಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: 'DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ'- ಸಿಎಂ ಸೂಚನೆರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ಮುಂದಿನ 3 ದಿನಗಳ ಕಾಲ ಭಾರೀ ಮಳೆ..! 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಸಾರ್ವಜನಿಕ ಸ್ಥಳದಲ್ಲಿ ಗುಟ್ಕಾ ಉಗುಳುವುದು, ಸಿಗರೇಟು ಸೇದಿದರೆ ದಂಡ - 1,000 ರೂ.ಗೆ ಏರಿಕೆಸೋಷಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ಪೋಸ್ಟ್; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಪ್ರಕರಣ ದಾಖಲುಮಂಗಳೂರು: ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗೆ ಲಂಚ ನೀಡಲು ಬಂದ ಅಧಿಕಾರಿ ಅರೆಸ್ಟ್ಯುದ್ಧನೌಕೆ, ಜಲಾಂತರ್ಗಾಮಿಗಳ ಮಾಹಿತಿ ಪಾಕಿಸ್ತಾನಕ್ಕೆ ರವಾನಿಸಿದ ಇಂಜಿನಿಯರ್‌ ಬಂಧನಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮತ್ತೆ ಇಬ್ಬರ ಬಂಧನ..!5 ಕೋಟಿ ಲಂಚದ ಬೇಡಿಕೆ- ಒಡಿಶಾದಲ್ಲಿ ಇಡಿ ಅಧಿಕಾರಿಯನ್ನು ಬಂಧಿಸಿದ ಸಿಬಿಐರಾಜ್ಯದಲ್ಲಿ ಕೊರೊನಾ ಸೊಂಕಿಗೆ ಮೂರನೇ ಬಲಿ; ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಿದ ಕೇಂದ್ರ