LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನನ್ನ ದಾಖಲೆ ನಕಲಿ ಇದ್ದರೆ ಸಿಎಂ ನನ್ನ ವಿರುದ್ಧ ಮೊಕದ್ದಮೆ ಹೂಡಲಿ'- ಸ್ನೇಹಮಯಿ ಕೃಷ್ಣ

ಮೈಸೂರು:  ನನ್ನ ದಾಖಲೆ ನಕಲಿ ಎಂಬುದಾದರೆ, ಸಿಎಂ ನನ್ನ ವಿರುದ್ಧ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಿ. ಇದನ್ನು ಬಿಟ್ಟು ಜನರಿಗೆ ಪ್ರಚೋದನೆ ನೀಡುವುದು ಸರಿಯಲ್ಲ ಎಂದು ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸ್ನೇಹಮಯಿ ಕೃಷ್ಣ ಟಾಂಗ್ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿರುವ ದೂರದಾರ ಸ್ನೇಹಮಯಿ ಕೃಷ್ಣ ವಿರುದ್ಧವೇ ನಿನ್ನೆ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ನಕಲಿ ದಾಖಲೆ ಸೃಷ್ಟಿ ಎಂಬ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ನನ್ನ ವಿರುದ್ಧ ಕಾಂಗ್ರೆಸ್ ವಕ್ತಾರ ಸಲ್ಲಿಸಿರುವ ದೂರಿನಲ್ಲಿ ಹುರುಳಿಲ್ಲ. ನನಗೆ ಆ ಎಫ್‌ಐಆರ್‌ನಿಂದ ಸಂತೋಷವಾಗಿದೆ. ಸಿಎಂ ಹಾಗೂ ಸಿಎಂ ಪತ್ನಿ ಈಗ ದೇವರಾಜ ಪೊಲೀಸ್ ಠಾಣೆಗೂ ಬರಬೇಕಾಗುತ್ತದೆ. ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಖುದ್ದು ಸಿಎಂಗೆ ಸಂಕಷ್ಟ ಜಾಸ್ತಿ ಮಾಡ್ತಿದ್ದಾರೆ ಎಂದು ತಿಳಿಸಿದರು.

ನಾನು ಆರೋಪಿಸಿರುವುದು ಸಿಎಂ ಮತ್ತು ಅವರ ಪತ್ನಿ ವಿರುದ್ಧ. ಆದರೆ, ಅವರು ನನ್ನ ವಿರುದ್ಧ ದೂರು ಕೊಡುತ್ತಿಲ್ಲ. ಲಕ್ಷ್ಮಣ್ ಅವರು ಮಾಡ್ತಿದ್ದಾರೆ. ಇವರ ದೂರಿನ ಮೇಲೆ ನನಗೆ ಅನುಮಾನವಿದೆ. ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ನಿಲ್ಲಿಸಿ ಸಿದ್ದರಾಮಯ್ಯ ಅವರು ಸೋಲಿಸಿದ್ದಾರೆಂಬ ಬೇಸರಕ್ಕೆ ಈ ರೀತಿ ಮಾಡಿದ್ದಾರೆ. ಸ್ವತಃ ಸಿಎಂ ಅವರನ್ನೇ ಸಿಕ್ಕಿಹಾಕಿಸುವ ಪ್ಲ್ಯಾನ್ ಮಾಡಿದ್ದಾರೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್'ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ'- ಮುನಿಯಪ್ಪಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಸಣ್ಣ ತಪ್ಪುಗಳಿಗೆ ಜೈಲು ಶಿಕ್ಷೆ ವಿಧಿಸುವಂತಿಲ್ಲ, ತಿದ್ದುಪಡಿಗೆ ಮುಂದಾದ ಕೇಂದ್ರ ಸರ್ಕಾರ!!540 ಅರಣ್ಯ ರಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿ: ಈಶ್ವರ ಖಂಡ್ರೆ.!ಮಹೇಶ್ ಶೆಟ್ಟಿ ತಿಮರೋಡಿ ಬಂಧನಕ್ಕೆ ಗೃಹ ಸಚಿವ ಪರಮೇಶ್ವರ್ ಸೂಚನೆಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟಿ ಪ್ರಕರಣ: ಗೃಹ ಸಚಿವ ಪರಮೇಶ್ವರ್ ಹೇಳಿದ್ದು.?