LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಮ್ಮ ಕುಟುಂಬದ ವಿರುದ್ಧ ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ'- ಹೆಚ್‌ಡಿಕೆ

ದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕುತಂತ್ರ ಮಾಡುತ್ತಿರುವವರು ಯಾರು. ಹೆಚ್.ಡಿ.ರೇವಣ್ಣ ಮತ್ತು ಮಕ್ಕಳ ವಿರುದ್ಧ ಷಡ್ಯಂತ್ರ ಮಾಡಿದ್ದು ಯಾರು? ಅವರನ್ನು ಜೈಲಿಗೆ ಕಳುಹಿಸಿದವರು ಯಾರು? ನಮ್ಮ ಕುಟುಂಬದ ವಿರುದ್ಧ ಮಾತನಾಡಿದರೆ ಸುಮ್ಮನೆ ಬಿಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ಮಾಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮಗನನ್ನು ಬೆಳೆಸಲು ಮತ್ತೊಬ್ಬ ಮಗನನ್ನು ಮುಗಿಸಿದರು. ಮನುಷ್ಯನ ಅವನು. ನನ್ನ ಕುಟುಂಬದ ವಿರುದ್ಧ ಮಾತಾಡ್ತಾರಾ? 10 ತಿಂಗಳಲ್ಲಿ ಸರ್ಕಾರ ಬೀಳಿಸಲು ಸಂಚು ಎಂದು ಶಿವಕುಮಾರ್ ಆರೋಪ ಮಾಡಿದ್ದಾರೆ. ಸರ್ಕಾರ ಬೀಳಿಸಲು ಟ್ರೈ ಮಾಡಿದ್ದಾರೆಂದು ಅಜ್ಜಯ್ಯ ಹೇಳಿದ್ರಾ? ಸುಮ್ಮನೆ ನನ್ನನ್ನು ಕೆಣಕಬೇಡಿ ಎಂದು ಕಿಡಿಕಾರಿದರು.

ಕಾಂಗ್ರೆಸ್‌ನ ಜನಾಂದೋಲನ ಕಾರ್ಯಕ್ರಮದ ಕುರಿತು ಪ್ರತಿಕ್ರಿಯೆ ನಿಡಿದ ಅವರು, ಇವತ್ತಿನ ಕಾಂಗ್ರೆಸ್ ನಾಯಕರ ಜನಾಂದೋಲನ ಕಾರ್ಯಕ್ರಮ ನಾಚಿಕೆ ಆಗಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಆರೋಪ ಮಾಡಿದರು. ವಿರೋಧ ಪಕ್ಷದ ಸ್ಥಾನಕ್ಕೆ ಅತ್ಯಂತ ನಿಷ್ಕ್ರಿಯವಾಗಿ ಸಿದ್ದರಾಮಯ್ಯ ಕೆಲಸ ಮಾಡಿದ್ದರು. ಕಡಿಮೆ ಸಂಖ್ಯೆ ಇದ್ದ ಜೆಡಿಎಸ್ ದಾಖಲೆ ಸಮೇತ ಹೋರಾಟ ಮಾಡಿದ್ದೇವು ಎಂದು ಲೇವಡಿ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST