LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಮ್ಮ ಸರಕಾರ ಇರುವವರೆಗೂ ಯಾವುದೇ ಕಾರಣಕ್ಕು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ.! ಸಿಎಂ ಭರವಸೆ.!

 

ಚನ್ನಪಟ್ಟಣ: ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ದೊಡ್ಡ ಸುಳ್ಳು ಹೇಳಿದ್ದಾರೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದ ಅವರು ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ. ಇದಕ್ಕೆ ನಾನೇ ಗ್ಯಾರಂಟಿ. ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ  ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ. ಹೆಚ್ ಡಿ ಕುಮಾರಸ್ವಾಮಿ ಅವರೇ, ನೀವು ಏನು ಸಾಧನೆ ಮಾಡಿದ್ದೀರಿ ಎಂದು ಪ್ರಶ್ನೆ ಮಾಡಿದರು.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST