'ನಸ್ರಲ್ಲಾ ಹತ್ಯೆ ಬೆನ್ನಲ್ಲೆ ಜೀವ ಭಯ' : ಸುರಕ್ಷಿತ ಅಡಗುತಾಣ ಸೇರಿದ ಇರಾನ್ ಸರ್ವೋಚ್ಚ ನಾಯಕ ಖಮೇನಿ!
ಟೆಹ್ರಾನ್: ಇಸ್ರೇಲಿ ರಕ್ಷಣಾ ಪಡೆ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನೇ ಹೊಡೆದುರುಳಿಸಿದೆ. ಕಳೆದ ತಡರಾತ್ರಿ ಬೈರುತ್‌ನ ದಕ್ಷಿಣ ಉಪನಗರದಲ್ಲಿರುವ ಲೆಬನಾನಿನ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯ ಮೇಲೆ ನಡೆದ ದಾಳಿಯಲ್ಲಿ ನಸ್ರಲ್ಲಾ ಸಾವನ್ನಪ್ಪಿದ್ದು, ಇದಾದ ಬಳಿಕ ಈ ಪ್ರದೇಶದಲ್ಲಿ ಉದ್ವಿಗ್ನತೆ ಉತ್ತುಂಗಕ್ಕೇರಿದೆ. ಇನ್ನು ಹಿಜ್ಬುಲ್ಲಾ ಮುಖ್ಯಸ್ಥನನ್ನೇ ಇಸ್ರೇಲ್ ಹೊಡೆದುರುಳಿಸಿರುವುದು ಇದೀಗ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಜೀವ ಭಯ ಶುರುವಾಗಿದೆ. ಹೀಗಾಗಿ ಖಮೇನಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ ಎಂದು ವರದಿಯಾಗಿದೆ. ಹಸನ್ ನಸ್ರಲ್ಲಾ ಹತ್ಯೆಯನ್ನು ಇಸ್ರೇಲ್ ಘೋಷಿಸಿದ ನಂತರ ಮುಂದಿನ ಹಂತವನ್ನು ನಿರ್ಧರಿಸಲು ಇರಾನ್, ಹಿಜ್ಬುಲ್ಲಾ ಮತ್ತು ಇತರ ಪ್ರಾಕ್ಸಿ ಗುಂಪುಗಳೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ. ಈ ಹಿಂದೆ, ನಸ್ರಲ್ಲಾ ಜೊತೆಗೆ ಭಯೋತ್ಪಾದಕ ಸಂಘಟನೆಯ ಹಲವಾರು ಕಮಾಂಡರ್‌ಗಳು ಸಹ ಹತ್ಯೆಯಾಗಿದ್ದಾರೆ ಎಂದು ಐಡಿಎಫ್ ಹೇಳಿಕೊಂಡಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.