LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ'- ಸಚಿವ ಬೋಸರಾಜು ಸ್ಪಷ್ಟನೆ

ರಾಯಚೂರು : ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ ಎಂದು ದೂರಿನ ಬೆನ್ನಲ್ಲೇ ಸಚಿವ ಎನ್.ಎಸ್.ಬೋಸರಾಜು ಸ್ಪಷ್ಟನೆ ನೀಡಿದ್ದಾರೆ.

ತಮ್ಮ ಪತ್ನಿ ಹೆಸರಿನಲ್ಲಿ ರಾಯಚೂರಿನಲ್ಲಿ 5 ಎಕರೆ ಮೀಸಲು ರಕ್ಷಿತ ಅರಣ್ಯ ಪ್ರದೇಶ ಒತ್ತುವರಿ ಮಾಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲಹಳ್ಳಿ ಅ.21 ರಾಜ್ಯಪಾಲರಿಗೆ ದೂರು ನೀಡಿದ್ದರು.

ಬೋಸರಾಜು ಅಧಿಕಾರ ದುರ್ಬಳಕೆ ಮಾಡಿಕೊಂಡು ಪತ್ನಿ ಕೃಷ್ಣವೇಣಿ ಮೂಲಕ ಅರಣ್ಯ ಭೂಮಿ ಕಬಳಿಸಿದ್ದಾರೆ. ಕಾನೂನಿನ ನಿಯಮಗಳನ್ನು ಗಾಳಿಗೆ ತೂರಿ ಮೀಸಲು ಅರಣ್ಯ ಭೂಮಿ ವಶಕ್ಕೆ ಪಡೆದಿದ್ದಾರೆ. ಪತ್ನಿ ಸೇರಿ ನಾಲ್ಕು ಜನರಿಗೆ ಸಹಾಯ ಮಾಡಿ, ಒಟ್ಟು 16 ಎಕರೆ 21 ಗುಂಟೆ ಅರಣ್ಯ ಭೂಮಿ ಒತ್ತುವರಿ ಮಾಡಲಾಗಿದೆ. ಸಿ.ಎಚ್.ಶ್ರೀನಿವಾಸ, ಕೃಷ್ಣವೇಣಿ, ಮುತ್ಯಾಲ ತಿರುಮಲ ರಾವ್, ವಿ.ಶಿವನಾಥ್ ವಿರುದ್ಧ 2022ರ ಆ.4 ರಂದು ರಾಯಚೂರು ಉಪವಲಯ ಅರಣ್ಯಾಧಿಕಾರಿಗಳಿಂದ ಪ್ರಕರಣ ದಾಖಲಾಗಿದೆ. ಆದರೆ ಇದುವರೆಗೂ ಕ್ರಮ ಜರುಗಿಸಿಲ್ಲ ಎಂದು ದಿನೇಶ್ ಕಲಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಭೂಕಬಳಿಕೆದಾರರೊಂದಿಗೆ ಶಾಮೀಲಾಗಿ ಅಕ್ರಮವಾಗಿ ಭೂಮಿ ಪಡೆದು ಲೇಔಟ್ ನಿರ್ಮಾಣ ಮಾಡಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳಬೇಕು. ಸಚಿವ ಸಂಪುಟದಿಂದ ಕೈಬಿಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ರಾಜ್ಯಪಾಲರ ಬಳಿ ಮನವಿ ಮಾಡಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶ ನಕಲಿ ಮದ್ಯ ಸೇವಿಸಿ 14 ಮಂದಿ ಸಾವು3 ಪಾಕ್ ಭಯೋತ್ಪಾದಕರ ಪೋಸ್ಟರ್‌ ಬಿಡುಗಡೆ- ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನಶೋಪಿಯಾನ್‌ನಲ್ಲಿ ಭದ್ರತಾ ಪಡೆಯೊಂದಿಗೆ ಗುಂಡಿನ ಚಕಮಕಿ- ಮೂವರು ಉಗ್ರರ ಹತ್ಯೆಚದುರಂಗ ಆಟವನ್ನೇ ನಿಷೇಧಿಸಿದ ತಾಲಿಬಾನ್- ಕಾರಣವೇನು?ಮಸೀದಿಯಲ್ಲಿದ್ದ ಕುರಾನ್‌ ಕದ್ದೊಯ್ದು ಭಸ್ಮ, ಬೆಳಗಾವಿಯಲ್ಲಿ ಪ್ರತಿಭಟನೆ, ಉದ್ವಿಗ್ನ ವಾತಾವರಣಬೆಂಗಳೂರು ಸೇರಿ ಕರ್ನಾಟಕದ 21 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ಆಂಧ್ರದಲ್ಲಿ ಸೈನಿಕರ ಆಸ್ತಿಗೆ ತೆರಿಗೆ ವಿನಾಯಿತಿ: ಪವನ್ ಕಲ್ಯಾಣ್ ಘೋಷಣೆ'ನ್ಯೂಕ್ಲಿಯರ್‌ ಬ್ಲ್ಯಾಕ್‌ಮೇಲ್‌ಗೆ ನಾವು ಬೆದರಲ್ಲ'- ಪಾಕ್‌ಗೆ ಮೋದಿ ಎಚ್ಚರಿಕೆಮತ್ತೆ ಪಾಕ್‌ನಿಂದ ಡ್ರೋನ್ ದಾಳಿಮಂಗಳೂರು :ಟಿಂಟೆಡ್‌ ಗ್ಲಾಸ್‌ ವಿರುದ್ಧ ಪೊಲೀಸರ ಕಾರ್ಯಾಚರಣೆ-504 ಕಾರುಗಳಿಗೆ ₹2.53 ಲಕ್ಷ ದಂಡ