ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಬ್ಯಾನರ್ ಮುಕ್ತ ಜಾತ್ರೆ.!
ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಬೇಕು. ಜಾತ್ರೆಯ ಯಶಸ್ವಿಗಾಗಿ ರಚಿಸಿರುವ ಉಪ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಫೆ.27 ರಿಂದ ಮಾರ್ಚ್ 09 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 06ರಂದು ರಥೋತ್ಸವ ನಡೆಯಲಿರುವ ಪ್ರಯುಕ್ತ ಈ ಬಾರಿಯ ಜಾತ್ರೆಯಲ್ಲಿ ರಾಜಕೀಯ ಮತ್ತು ವೈಯಕ್ತಿಕ ಪ್ರಚಾರದ ಬ್ಯಾನರ್‍ಗಳಿಗೆ ಅವಕಾಶವಿರುವುದಿಲ್ಲ. ಕೇವಲ ಸಾರ್ವಜನಿಕ ಮಾಹಿತಿ ನೀಡುವ ಸೂಚನಾ ಫಲಕಗಳು ಮತ್ತು ದೇವಸ್ಥಾನದ ಅಧಿಕೃತ ಸ್ವಾಗತ ಫಲಕಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ಯಾವುದೇ ಅನಧಿಕೃತ ಬ್ಯಾನರ್‍ಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಾಂತರಾಜ್, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರ್, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.