LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ

ದೆಹಲಿ: ಅರವಿಂದ ಕೇಜ್ರಿವಾಲ್ ಅವರು ನಾಳೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಷೇನಾ ಅವರನ್ನು ಭೇಟಿ ಮಾಡಲು ಸಮಯ ಕೇಳಿದ್ದಾರೆ. ಈ ಹಿನ್ನೆಲೆ ಕೇಜ್ರಿವಾಲ್ ನಾಳೆ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂದು ಆಮ್ ಆದ್ಮ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಮುಂಬರುವ ಚುನಾವಣೆಯಲ್ಲಿ ಜನರು 'ನಾವು ಪ್ರಾಮಾಣಿಕರು' ಎಂದು ಹೇಳಿದಾಗ ಮತ್ತೆ ಮುಖ್ಯಮಂತ್ರಿಯಾಗಿ ಅರವಿಂದ ಕೇಜ್ರಿವಾಲ್ ಹಾಗೂ ಉಪಮುಖ್ಯಮಂತ್ರಿಯಾಗಿ ಮನೀಶ್ ಸಿಸೋಡಿಯಾ ಅಧಿಕಾರ ಸ್ವೀಕರಿಸುತ್ತಾರೆ ಎಂದು ಎಎಪಿ ಹೇಳಿದೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆಯಾಗಿದ್ದರು. ಎಎಪಿ ಶಾಸಕರ ಸಭೆಯನ್ನು ಇನ್ನು 2  ದಿನಗಳಲ್ಲಿ ನಡೆಸಲಾಗುತ್ತದೆ. ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು. ಇದರ ಬೆನ್ನಲ್ಲೇ ಜನರು ಪ್ರಾಮಾಣಿಕತೆಯ ಪ್ರಮಾಣ ಪತ್ರವನ್ನು ನೀಡಿದಾಗ ನಾನು ಮತ್ತೆ ಮುಖ್ಯಮಂತ್ರಿ ಹುದ್ದೆಯಲ್ಲಿ ಕುಳಿತುಕೊಳ್ಳುತ್ತೇನೆ. ಇನ್ನೆರಡು ದಿನದಲ್ಲಿ ರಾಜೀನಾಮೆ ನೀಡುತ್ತೇನೆ ಎಂದು ಭಾನುವಾರ ಕೇಜ್ರಿವಾಲ್ ಅವರು ತಿಳಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗ್ಯಾರಂಟಿ ಯೋಜನೆಗಳ ಜಾಗೃತಿ ವಾಹನಕ್ಕೆ ಎಸ್.ಜೆ.ಸೋಮಶೇಖರ್ ಹಸಿರು ನಿಶಾನೆಬಿಜೆಪಿಯವರಿಗೆ ಪಕ್ಷ, ಸಿದ್ಧಾಂತ, ಪದ್ಧತಿ ಇಲ್ಲ.! ಬೋಸರಾಜು.!ಫೆ. 13 ರಿಂದ 15ರವರೆಗೆ ಸಂತ ಸೇವಾಲಾಲರ 286ನೇ ಜಾತ್ರಾ ಮಹೋತ್ಸವ.!ಪಿಎಂ ಕಿಸಾನ್‌ ಸಮ್ಮಾನ್‌ ಯೋಜನೆಯ 19ನೇ ಕಂತು ಹಣ ಬಿಡುಗಡೆ ಯಾವಾಗ?ಮಹಾ ಕುಂಭಮೇಳ ಹಿನ್ನೆಲೆ ಬಿಹಾರದಲ್ಲಿ 45 ಕಿ.ಮೀ.ವರೆಗೆ ಸಂಚಾರ ದಟ್ಟಣೆರಾಹುಲ್ ಗಾಂಧಿ ಬಗ್ಗೆ ವಿವಾದಿತ ಪೋಸ್ಟ್- ದೂರು ದಾಖಲುಡ್ರಗ್ಸ್‌ ಪ್ರಕರಣ: ನಟಿ ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟSSLC / PUC ಉತ್ತೀರ್ಣರಾದರೆ ಸಾಕು: ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಬೇಸಿಗೆ ರಜೆಯಲ್ಲಿಯೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ..!ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು