E-PAPER
17 Nov 2026, 12:24:12 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ನಾಳೆ ಜ. ೨೫ ರಂದು ಭರತೇಶ ಶಿಕ್ಷಣ ಸಂಸ್ಥೆಯಲ್ಲಿ ಸಂಗೀತ ಸಂಜೆ

ಬೆಳಗಾವಿ-೨೪: ಕಳೆದ ೬೫ ವರ್ಷಗಳಿಂದ ಉತ್ತರ ಕರ್ನಾಟಕದ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಭರತೇಶ ಶಿಕ್ಷಣ ಸಂಸ್ಥೆಯ ವತಿಯಿಂದನಾಳೆ ಜನೇವರಿ ೨೫ ರಂದು ಸಾಯಂಕಾಲ ೪ ಗಂಟೆಗೆ ಬಸವನ ಕುಡಚಿಯ ಕ್ಯಾಂಪಸನಲ್ಲಿ ಖ್ಯಾತ ಸಂಗೀತಕಾರರಿಂದ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ವಿನೋದ ದೊಡ್ಡಣ್ಣವರ ಅವರು ಇಂದಿಲ್ಲಿ ಹೇಳಿದರು.
ಇತ್ತೀಚಿಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಸಂಗೀತ ಸಂಜೆ ವೈಬ್ಸ ಎಂಬ ಹೆಸರಿಡಲಾಗಿದ್ದು, ಈ ಸಂಗೀತ ಸಂಜೆಯಲ್ಲಿ ಶಾಸ್ತ್ರೀಯ ಸಂಗೀತ, ಬಾಲಿಯುಡ್ ಸಂಗಿತ ಕ್ಷೇತ್ರದ ಹಿನ್ನಲೆ ಗಾಯಕರಾದ ಶಂಕರ್ ಮಹಾದೇವನ್ ಅವರ ಪುತ್ರರಾದ ಶಿವಂ ಮತ್ತು ಸಿದ್ದಾರ್ಥ ಅವರು ಸಂಗೀತ ಸಂಜೆಯನ್ನು ನಡೆಸಿಕೊಡಲಿದ್ದಾರೆ ಎಂದು ಅವರು ತಿಳಿಸಿದರು.
ಈ ಸಂಗೀತ ಸಂಜೆಯಲ್ಲಿ ಶಾಸ್ತ್ರೀಯ ಸಂಗೀತ, ರಾಕ್ ಸಂಗೀತ, ಹಿಂದೂಸ್ಥಾನಿ ಸಂಗೀತ, ಬಾಲಿವುಡ್ ಸಂಗೀತದ ರಸದೌತನವನ್ನು ನೀಡಲಿದ್ದಾರೆ. ಕಳೆದ ಸಾಲಿನಲ್ಲಿಯೂ ಸಹ ಸಾಚೇತ ಅವರ ಸಂಗೀತ ಸಂಜೆಯನ್ನು ಆಯೋಜಿಸಲಾಗಿತ್ತು. ಈ ಬಾರಿಯ ಸಂಗೀತ ಕಾರ್ಯಕ್ರಮ ಯುವ ವರ್ಗಕ್ಕೆ ಹೊಸ ಪ್ರೇರಣೆ ನೀಡಲಿದೆ ಎಂದು ಹೇಳಿದ ಅವರು, ಈ ಕಾರ್ಯಕ್ರಮವನ್ನು ಚಂದುಕಾಕಾ ಸರಾಫ ಜ್ಯುವೆಲ್ಸ್ ಮತ್ತು ಐಟಿಸಿ ವೆಲಕಮ್ ಗ್ರುಫ ಅವರು ಪ್ರಾಯೋಜಿಸಿದ್ದಾರೆ ಎಚಿದು ಅವರು ತಿಳಿಸಿದರು.
ಈ ಕಾರ್ಯಕ್ರಮವನ್ನು ವೀಕ್ಷಿಸುವ ಬಯಸುವವರು ಭರತೇಶ ಶಿಕ್ಷಣ ಸಂಸ್ಥೆಯ ಅಂಗ ಸಂಸ್ಥೆಗಳನ್ನು ಸಂಪರ್ಕಿಸಬಹುದು. ಅಥವಾ ಮೊ: ೯೦೭೧೦೨೧೭೭೭ ಇಲ್ಲಿ ಸಂಪರ್ಕಿಸಿ ಪ್ರವೇಶ ಪತ್ರಗಳನ್ನು ಪಡೆಯಬಹುದಾಗಿದೆ ಎಂದು ಅವರು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಶ್ರೀಪಾಲ ಖೆಮಲಾಪೂರೆ, ಆಡಳಿತ ಮಂಡಳಿಯ ಸದಸ್ಯರಾದ ಹೀರಾಚಂದ ಕಲಮನಿ, ಡಾ. ಸಾವಿತ್ರಿ ದೊಡ್ಡಣ್ಣವರ, ಅನುಪಮಾ ಶಿರಹಟ್ಟಿ, ಕೀರ್ತಿ ದೊಡ್ಡಣ್ಣವರ ಮೊದಲಾದವರು ಪಾಲ್ಗೊಂಡಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.