LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂ

ಬೆಂಗಳೂರು: "ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿದ್ದೇವೆ. ನಮ್ಮದು ಶಾಂತಿಪ್ರಿಯ ರಾಜ್ಯ. ಇಲ್ಲಿ ದುಷ್ಕೃತ್ಯಕ್ಕೆ ಅವಕಾಶವಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ , ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನ ವಿಚಾರವಾಗಿ ಕೇಳಿದ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿ ಮಾತನಾಡಿ "ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಸ್ಟಂಟ್ ಮಾಡುತ್ತಿದೆ. ಬಾಕಿ ಪ್ರಕರಣಗಳ ವಿಲೇವಾರಿಗೆ ಸರ್ಕಾರ ಮುಂದಾಗಿರುವುದಾಗಿ ಗೃಹ ಸಚಿವರು ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಯಾರು ರಾಜ್ಯಕ್ಕೆ ಅಗೌರವ ನೀಡಿದ್ದಾರೆ, ಯಾರು ಕಾನೂನು ಉಲ್ಲಂಘಿಸಿದ್ದಾರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು.

ಬಿಜೆಪಿ ಅವರಿಗೆ 7 ತಿಂಗಳ ಕಾಲ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಸಾಧ್ಯವಾಗಿರಲಿಲ್ಲ. ಈಗ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ತಾವು ರಾಜಕೀಯವಾಗಿ ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಹೀಗೆ ಮಾತನಾಡುತ್ತಿದ್ದಾರೆ. ಅವರು ಏನಾದರೂ ಮಾಡಿಕೊಳ್ಳಲಿ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾವು ಹಾಗೂ ಜನ ಇದಕ್ಕೆ ಉತ್ತರ ನೀಡುತ್ತೇವೆ. ನಾವು ಅವರಂತೆ ಅಧಿಕಾರ ದುರ್ಬಳಕೆ ಮಾಡಿಕೊಂಡು, ಅನ್ಯ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕುತ್ತಿಲ್ಲ. ಬಿಜೆಪಿ ಸರ್ಕಾರ ಇದ್ದಾಗ ಹುಬ್ಬಳ್ಳಿ, ಬೆಂಗಳೂರಿನಲ್ಲಿ ಎಷ್ಟು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇಸ್ ದಾಖಲಿಸಿದೆ ಎಂಬುದನ್ನು ನೋಡಿ. ನಾವು ಇದುವರೆಗೂ ಆ ರೀತಿ ಮಾಡಿಲ್ಲ. ಮುಂದೆಯೂ ಮಾಡಲ್ಲ."

ಪೊಲೀಸ್ ಠಾಣೆ ಮುತ್ತಿಗೆ ಹಾಕಲು ವಿರೋಧ ಪಕ್ಷದ ನಾಯಕರು ಹುಬ್ಬಳ್ಳಿಗೆ ತೆರಳಿರುವ ಬಗ್ಗೆ ಕೇಳಿದಾಗ, "ಅವರು ಹೋಗಿ ಕಟ್ಟಿ ಹಾಕಿಕೊಳ್ಳಲಿ. ಅವರ ಸರ್ಕಾರದಲ್ಲಿ ಏನೆಲ್ಲಾ ಮಾಡಿದ್ದರು ಎಂದು ನೋಡಿಕೊಳ್ಳಲಿ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಮವಸ್ತ್ರ ಬದಲು ಕೇಸರಿ ಬಟ್ಟೆ ಹಾಕಿಸಿದರು. ಅಂತಹ ಕೆಲಸ ನಾವು ಮಾಡಿಲ್ಲ" ಎಂದು ತಿರುಗೇಟು ನೀಡಿದರು.

ನಿಮ್ಮ ವಿರುದ್ಧದ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ನೀಡಿದ್ದು, ತನಿಖೆ ಆರಂಭವಾಗಿರುವ ಬಗ್ಗೆ ಕೇಳಿದಾಗ, "ನನಗೆ ಯಾವುದೇ ರೀತಿಯ ನೊಟೀಸ್ ಬಂದಿಲ್ಲ. ಬಂದ ನಂತರ ಈ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ" ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇವರು ನನ್ನನ್ನು ಜೀವಂತ ಸಮಾಧಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಧಾನಿ ಮೋದಿ ವಾಗ್ದಾಳಿಇಂದಿನಿಂದ ಮೇ 16ರವರೆಗೆ ಧಾರಾಕಾರ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ..!'ಸೈಬರ್‌ಕ್ರೈಮ್‌ ವಿರುದ್ದ ಸಮರ': ದೇಶಾದ್ಯಂತ 28,000ಕ್ಕೂ ಹೆಚ್ಚು ಮೊಬೈಲ್‌ ಹ್ಯಾಂಡ್‌ಸೆಟ್‌ ಬ್ಲಾಕ್ವಿದ್ಯಾರ್ಥಿನಿ ತಲೆ ಕಡಿದು ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್ಪ್ರಜ್ವಲ್ ರೇವಣ್ಣ ನಾಪತ್ತೆ: ಹುಡುಕಿ ಕೊಟ್ಟವರಿಗೆ ನಗದು ಬಹುಮಾನ ಘೋಷಣೆಹೀರೆಕಾಯಿ ಸಿಪ್ಪೆ ಚಟ್ನಿ ಮಾಡಿ ಸವಿಯಿರಿ‘ಕರಿಬೇವಿ’ನಲ್ಲಿದೆ ಈ ಆರೋಗ್ಯ ಭಾಗ್ಯಪ್ರಜ್ವಲ್ ರೇವಣ್ಣ ಅಶ್ಲೀ ಲ ವೀಡಿಯೋ ಕೇಸ್‌- ದೇವರಾಜೇ ಗೌಡ ಅರೆಸ್ಟ್‌ಮುಂದಿನ ಐದು ದಿನಗಳಲ್ಲಿ ಕರ್ನಾಟಕದ 23 ಜಿಲ್ಲೆಗಳಲ್ಲಿ ಚಂಡಮಾರುತ.!ಪ್ರಥಮ ಪಿಯುಸಿ ವಿಜ್ಞಾನ ಕೋರ್ಸ್‍ಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ