ನಿಜಶರಣ ಅಂಬಿಗರ ಚೌಡಯ್ಯ ಸಮುದಾಯಗಳಿಗೆ ವಿವಿಧ ಸಾಲ, ಸೌಲಭ್ಯಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ: ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಜನಾಂಗದ ಸಮುದಾಯಕ್ಕೆ ಪ್ರಸಕ್ತ ಸಾಲಿನಲ್ಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಡಿ ಸಾಲ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಸೇವಾ ಸೇವಾ ಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರದಲ್ಲಿ ಆಗಸ್ಟ್ 30 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿಗಾಗಿ ನಿಗಮದ ವೆಬ್‌ಸೈಟ್ https://kvldc.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 08192-230934 ಗೆ ಸಂಪರ್ಕಿಸಬಹುದು ಎಂದು ನಿಜಶರಣ ಅಂಬಿಗರ ಚೌಡಯ್ಯ ಸಮುದಾಯ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.