LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಸುರಿದ ಮಳೆ 48 ಮನೆಗಳು ಭಾಗಶಃ ಹಾನಿ 14.3 ಮಿ.ಮೀ ಮಳೆ

 

ಚಿತ್ರದುರ್ಗ : ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 14.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 7.5 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 18.5 ಹಿರಿಯೂರು ತಾಲ್ಲೂಕು 25.1 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 13.9 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 25.1 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 4.2 ಮಿ.ಮೀ ಮಳೆಯಾಗಿದೆ.

ಹೋಬಳಿವಾರು ಮಳೆ ವಿವರ: ಚಳ್ಳಕೆರೆ  ತಾಲ್ಲೂಕಿನ ಚಳ್ಳಕೆರೆಯಲ್ಲಿ 2 ಮಿ.ಮೀ, ನಾಯಕನಹಟ್ಟಿ 22.3 ಮಿ.ಮೀ, ಪರಶುರಾಂಪುರ 1.3 ಮಿ.ಮೀ, ತಳಕು 7.4 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 11.5 ಮಿ.ಮೀ, ಭರಮಸಾಗರ 33.9 ಮಿ.ಮೀ, ಹಿರೇಗುಂಟನೂರು 15.5 ಮಿ.ಮೀ, ತುರುವನೂರು 16.4 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರು 22.5 ಮಿ.ಮೀ,  ಐಮಂಗಲ 8.3 ಮಿ.ಮೀ, ಧರ್ಮಪುರ 3.3 ಮಿ.ಮೀ, ಜವನಗೊಂಡನಹಳ್ಳಿ 3.6 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 31.1 ಮಿ.ಮೀ, ಬಿ.ದುರ್ಗ 32.6 ಮಿ.ಮೀ, ರಾಮಗಿರಿ 31.3 ಮಿ.ಮೀ, ತಾಳ್ಯ 10.8 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 13.5 ಮಿ.ಮೀ, ಮಾಡದಕೆರೆ 15.9 ಮಿ.ಮೀ, ಮತ್ತೋಡು 16.2 ಮಿ.ಮೀ, ಶ್ರೀರಾಂಪುರ 10.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 29.9 ಮಿ.ಮೀ ಹಾಗೂ ದೇವಸಮುದ್ರದಲ್ಲಿ 19.8 ಮಿ.ಮೀ ಮಳೆಯಾಗಿದೆ.

48 ಮನೆಗಳು ಭಾಗಶಃ ಹಾನಿ:  ಭಾನುವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 48 ಮನೆಗಳು ಭಾಗಶಃ ಹಾನಿಯಾಗಿದ್ದು, 18 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ, ಒಂದು ದೊಡ್ಡ ಜಾನುವಾರು ಹಾನಿ ಹಾಗೂ 2 ಹೆಕ್ಟೇರ್ ಕೃಷಿ ಬೆಳೆ ಹಾಗೂ 1 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.

ಚಿತ್ರದುರ್ಗ ತಾಲ್ಲೂಕಿನಲ್ಲಿ 6 ಮನೆಗಳು ಭಾಗಶಃ ಹಾನಿ, ಚಳ್ಳಕೆರೆ 10 ಮನೆಗಳು ಹಾಗೂ 1 ದೊಡ್ಡ ಜಾನುವಾರು ಹಾನಿ, 12 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ, 1 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾಗೂ 2 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದೆ.

ಹೊಳಲ್ಕೆರೆ 18 ಮನೆಗಳು, ಹೊಸದುರ್ಗ 2 ಮನೆಗಳು ಭಾಗಶಃ ಹಾನಿ ಹಾಗೂ 1 ಮನೆಗೆ ನೀರು ನುಗ್ಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 4 ಮನೆಗಳು ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 8 ಮನೆಗಳು ಭಾಗಶಃ ಹಾನಿ ಹಾಗೂ 5 ಮನೆಗಳಿಗೆ ನೀರು ನುಗ್ಗಿರುವ ಪ್ರಕರಣ  ವರದಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಟ್ರ್ಯಾಕ್ಟರ್ ಚಲಾಯಿಸುವಾಗ ಹೆಲ್ಮೆಟ್ ಕಡ್ಡಾಯವೇ? ಸಕಲೇಶಪುರದಲ್ಲಿ ಅಚ್ಚರಿ ನೋಟೀಸ್ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಸಿಹಿ ಸುದ್ದಿ, ಗೌರವಧನ 2 ಸಾವಿರ ರೂ ಹೆಚ್ಚಳಮೌಂಟ್ ಎವರೆಸ್ಟ್ ಇಳಿಯುವಾಗ ಭಾರತೀಯ ಪರ್ವತಾರೋಹಿ ಮೃತ್ಯುಸ್ವಾತಂತ್ರ್ಯ ಘೋಷಿಸಿಕೊಂಡ ಬಲೂಚಿಸ್ತಾನನಾಳೆಯಿಂದ ಭಾರೀ ಮಳೆ ಮುನ್ಸೂಚನೆ: 23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ'ಗಂಗಾವತಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲಿದೆ' - ಸಿಎಂ'ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ, ಇದು ಟ್ರೇಲರ್ ಅಷ್ಟೇ'- ಸಚಿವ ರಾಜನಾಥ್ ಸಿಂಗ್ಕಾಶ್ಮೀರದಲ್ಲಿ 48 ಗಂಟೆಗಳಲ್ಲಿ ಆರು ಪ್ರಮುಖ ಉಗ್ರರ ಹತ್ಯೆ'ಇಂಡಿಯಾ ಮೈತ್ರಿಕೂಟದ ಭವಿಷ್ಯ ಉಜ್ವಲವಾಗಿಲ್ಲ'- ಪಿ ಚಿದಂಬರಂರಸ್ತೆಗೆ ಬಿದ್ದ ಯುವತಿಯ ಮೇಲೆ ಹರಿದ ಕಾರು; ಇಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು