LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿನ್ನೆ 60 ಸ್ಥಳಗಳಲ್ಲಿಲೋಕಾಯುಕ್ತರ ದಾಳಿಯಿಂದ ವಶಪಡಿಸಿಕೊಂಡ ಮೊತ್ತ ಎಷ್ಟು.?

 

ಬೆಂಗಳೂರು: ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ ಆರೋಪದ ಮೇಲೆ 11 ಮಂದಿ ಸರ್ಕಾರಿ ಅಧಿಕಾರಿಗಳು ಹಾಗೂ ಒಬ್ಬ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಸೇರಿದ 60 ಸ್ಥಳಗಳಲ್ಲಿ ಶುಕ್ರವಾರ ಶೋಧ ನಡೆಸಿರುವ ಲೋಕಾಯುಕ್ತ ಪೊಲೀಸರು, ಒಟ್ಟು ₹1.20 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಬಳಿ ಒಟ್ಟು ₹49.85 ಕೋಟಿ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಮಾಡಲಾಗಿದೆ. ಈ ಪೈಕಿ ₹33.85 ಕೋಟಿ ಮೌಲ್ಯದ ಸ್ಥಿರಾಸ್ತಿ, ₹5.70 ಕೋಟಿ ಮೌಲ್ಯದ ಚಿನ್ನಾಭರಣ, ₹2.05 ಕೋಟಿ ಮೌಲ್ಯದ ವಾಹನಗಳು, ₹4.05 ಕೋಟಿ ಮೌಲ್ಯದ ಇತರ ಸ್ವತ್ತುಗಳು ಸೇರಿವೆ ಎಂದು ಲೋಕಾಯುಕ್ತ ಪೊಲೀಸ್ ವಿಭಾಗದ ಪ್ರಕಟಣೆ ತಿಳಿಸಿದೆ.

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ 12 ಎಫ್ಐಆರ್ ದಾಖಲಿಸಿ ತನಿಖೆ ಆರಂಭಿಸಲಾಗಿದೆ.

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಾಗಿರುವ ಕೆಎಎಸ್ ಅಧಿಕಾರಿ ಸಿ.ಎಲ್. ಆನಂದ್, ಇನ್ವೆಸ್ಟ್ ಕರ್ನಾಟಕ ಫೋರಂನ ಮುಖ್ಯ ಕಾರ್ಯಾಚರಣೆ ಅಧಿಕಾರಿ ಸಿ.ಟಿ. ಮುದ್ದುಕುಮಾರ್, ಕಾನೂನು ಮಾಪನಶಾಸ್ತ್ರ ಇಲಾಖೆಯ ಬೆಂಗಳೂರು ನಗರದ ಉಪ ನಿಯಂತ್ರಕ ಮೀರ್ ಅತ್ಥರ್ ಅಲಿ, ಮೈಸೂರು ಜಿಲ್ಲಾ ಕಾರ್ಮಿಕ ಅಧಿಕಾರಿ ಚೇತನ್ ಕುಮಾರ್, ಹೆಬ್ಬಗೋಡಿ ನಗರಸಭೆ ಆಯುಕ್ತ ಕೆ. ನರಸಿಂಹಮೂರ್ತಿ, ವಾಣಿಜ್ಯ ತೆರಿಗೆ ಇಲಾಖೆ ಜಂಟಿ ಆಯುಕ್ತ ರಮೇಶ್ ಕುಮಾರ್, ತೋಟಗಾರಿಕೆ ಇಲಾಖೆಯ ಶಿವಮೊಗ್ಗ ಜಿಲ್ಲಾ ಉಪ ನಿರ್ದೇಶಕ ಪ್ರಕಾಶ್ ಜಿ.ಎನ್., ಯಾದಗಿರಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಬಲವಂತ ರಾಥೋಡ್, ದೊಡ್ಡಬಳ್ಳಾಪುರ ತಾಲ್ಲೂಕಿನ ರಾಮೇಶ್ವರದ ಪಶುಸಂಗೋಪನಾ ನಿರೀಕ್ಷಕ ಆರ್. ಸಿದ್ದಪ್ಪ, ಕೆಐಎಡಿಬಿ ಭೂಸ್ವಾಧೀನಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಬಿ.ವಿ. ರಾಜ, ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕ ಮಂಜುನಾಥ್ ಟಿ.ಆರ್. ಮತ್ತು ಭದ್ರಾವತಿ ತಾಲ್ಲೂಕಿನ ಅಂತರಗಂಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಮೇಲೆ ದಾಳಿ ನಡೆದಿದೆ.

ಚೇತನ್ ಕುಮಾರ್ ಮನೆಯಲ್ಲಿ ಅತ್ಯಧಿಕ ₹58 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಅತ್ಥರ್ ಅಲಿ ಮನೆಯಲ್ಲಿ ₹28.15 ಲಕ್ಷ ನಗದು ಪತ್ತೆಯಾಗಿದ್ದರೆ, ಪ್ರಕಾಶ್ ಜಿ.ಎನ್. ಮನೆಯಲ್ಲಿ ₹12.86 ಲಕ್ಷ ನಗದು ಪತ್ತೆಯಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತದ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಥಾಕೂರ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸಂಸ್ಥೆಯ ಪೊಲೀಸ್ ವಿಭಾಗದ 85 ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾನುವಾರುಗಳ ಕಳವು, ಹತ್ಯೆ, ಮಾಡುವವರನ್ನು ಸಾರ್ವಜನಿಕವಾಗಿ ಗುಂಡಿಕ್ಕಬೇಕು- ಮಂಕಾಳ ವೈದ್ಯದೆಹಲಿ ಚುನಾವಣೆಗೂ ಮುನ್ನ ಸಿಎಂ ಅತಿಶಿ ವಿರುದ್ಧ ಪ್ರಕರಣ ದಾಖಲುಸಿದ್ದರಾಮಯ್ಯ ಕುಟುಂಬ ಬೇನಾಮಿ ಆಸ್ತಿ ಬಗ್ಗೆ ಸ್ನೇಹಮಯಿ ಕೃಷ್ಣ ದಾಖಲೆ ಬಿಡುಗಡೆಫೆ. 5 ಕ್ಕೆ ಪ್ರಧಾನಿ ಮೋದಿ ಮಹಾ ಕುಂಭ ಮೇಳಕ್ಕೆ ಭೇಟಿರೈಲ್ ಇಂಡಿಯಾದಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನಸುಳ್ಳು ಸುದ್ದಿ ಪ್ರಸಾರ: ಹೈಕೋರ್ಟ್ ಮೆಟ್ಟಿಲೇರಿದ ಆರಾಧ್ಯ ಬಚ್ಚನ್!!ಭಾರತೀಯ ವಲಸಿಗರನ್ನು ಅಮೆರಿಕದಿಂದ ಗಡಿಪಾರು ಮಾಡಲು ಆರಂಭಿಸಿದ ಟ್ರಂಪ್ಈ ಬಾರಿ SSLC ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇಲ್ಲ..!ನಮ್ಮ ಕ್ಲಿನಿಕ್ ಮಾಹಿತಿ ಕೊಡಲು ಬಿಬಿಎಂಪಿ ಹೊಸ ಪ್ಲಾನ್….!SSLC ಮತ್ತು PUC ಪಾಸಾದವರಿಗೆ ಖಾಲಿ ಇರುವ ಸರ್ಕಾರಿ ಹುದ್ದೆಗಳಿಗೆ ಈಗಲೇ ಅರ್ಜಿ ಸಲ್ಲಿಸಿ!