LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಿರುದ್ಯೋಗಿ ಯುವಕ -ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ'- ಸಿ.ಎಂ

ಕೋಲಾರ (ಶಿಡ್ಲಘಟ್ಟ): ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ಶಿಡ್ಳಘಟ್ಟದ ರೋಡ್ ಶೋನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವಿನ ಜನ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತಯಾಚಿಸಿ ಈ ರೀತಿ ಪ್ರಶ್ನಿಸಿದರು.

ನಿರುದ್ಯೋಗಿ ಯುವಕ/ಯುವತಿಯರಿಗೆ ಪಕೋಡ ಮಾರಿ ಅನ್ನೋಕೆ ಮೋದಿ ಪ್ರಧಾನಿಯೇ ಆಗಬೇಕಿತ್ತಾ.ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಮೋದಿ ಮಾತನ್ನು ನಂಬಿ ಯುವ ಸಮೂಹ ಮೋದಿಯವರಿಗೆ ಮತ ಹಾಕಿದ್ರು. ಹೀಗೆ ಮತ ಹಾಕಿದವರೆಲ್ಲಾ ಡಿಗ್ರಿ ಮುಗಿಸಿದ ಮೇಲೆ ಕೆಲ್ಸ ಕೊಡಿ ಎಂದು ಕೇಳಿದರೆ, "ಹೋಗಿ ಪಕೋಡ ಮಾರಾಟ ಮಾಡಿ" ಅಂದ್ರು.ಇದು ದೇಶದ ಯುವ ಸಮೂಹಕ್ಕೆ ಮಾಡಿದ ಮಹಾದ್ರೋಹ ಅಲ್ಲವೇ? ಮಹಾನ್ ನಂಬಿಕೆ ದ್ರೋಹ ಅಲ್ಲವೇ? ಪಕೋಡ ಮಾರೋದನ್ನು ಹೇಳಿಕೊಡೋಕೆ ಇವರು ಪ್ರಧಾನಿ ಆಗಬೇಕಿತ್ತಾ? ಎಂದು ಪ್ರಶ್ನಿಸಿದರು.‌

ಮೋದಿಯವರು ಪ್ರಧಾನಿಯಾಗಿ ನಾಲಾಯಕ್ ಅಂತ ವಿದ್ಯಾವಂತ ಯುವ ಸಮೂಹ ತೀರ್ಮಾನಿಸಿದೆ. ಇಂಥಾ ನಾಲಾಯಕ್ ಗೆ ಮತ ಹಾಕ್ತೀರಾ? ಹತ್ತತ್ತು ವರ್ಷ ಮತ ಹಾಕಿದ್ರಲ್ಲಾ ನಿಮಗೆ, ದೇಶಕ್ಕೆ ಏನಾದ್ರೂ ಸಿಕ್ಕಿತಾ ? ಈ ಹತ್ತು ವರ್ಷದಲ್ಲಿ ಏನೇನೂ ಕೊಡದವರು ಈ ಬಾರಿ ನಿಮ್ಮ ಮತ ಕೇಳುತ್ತಿದ್ದಾರೆ, ಹೀಗೆ ಮತ ಕೇಳುವ ಯೋಗ್ಯತೆಯಾಗಲೀ, ಅರ್ಹತೆಯಾಗಲೀ BJP ಯವರಿಗೆ ಇದೆಯೇ ಎಂದು ಪ್ರಶ್ನಿಸಿದರು.

ನಾಲಾಯಕ್ ಮೋದಿಯವರು ಬರುವ ಮೊದಲು ಪೆಟ್ರೋಲ್, ಡೀಸೆಲ್, ಗ್ಯಾಸ್, ರಸಗೊಬ್ಬರ, ಬೇಳೆಕಾಳು, ಅಡುಗೆ ಎಣ್ಣೆ ಬೆಲೆ ಎಷ್ಟಿತ್ತು?ಈಗ ಎಷ್ಟಾಗಿದೆ?‌ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ಕುಟುಂಬಗಳ ಜೇಬಿಗೆ ಪ್ರತಿ ತಿಂಗಳು 4 ರಿಂದ 6 ಸಾವಿರ ರೂಪಾಯಿ ಹಾಕುತ್ತಿದ್ದೇವೆ. ನಾವು ನುಡಿದಂತೆ ನಡೆದು ಬಂದು ಓಟು ಕೇಳುತ್ತಿದ್ದೇವೆ. ನಮಗೆ ಮತ ನೀಡಿ. ನಿಮ್ಮ ಮತಕ್ಕೆ ಗೌರವ ಕೊಟ್ಟು ಅಭಿವೃದ್ಧಿಯ ಲಾಭ ನಿಮ್ಮ ಜೇಬಿಗೆ, ನಿಮ್ಮ ಖಾತೆಗೆ ಹಾಕುವ ಕೆಲಸವನ್ಮು ನಾವು ಮಾಡ್ತೇವೆ ಎಂದು ಘೋಷಿಸಿದರು.

ವರ್ಷಕ್ಕೆ ಒಂದೂಕಾಲು ಲಕ್ಷ ಬಂದು ಬೀಳತ್ತೆ ನಿಮಗೆ ಹತ್ತತ್ತು ವರ್ಷ ನಿಮಗೆ ಮೋದಿಯವರಿಂದ ಸಿಕ್ಕಿದ್ದು ರಾಶಿ ರಾಶಿ ಸುಳ್ಳುಗಳು ಮತ್ತು ನಂಬಿಕೆ ದ್ರೋಹ ಮಾತ್ರ. ಆದರೆ ಈ ಬಾರಿ ನಮಗೆ ಮತ ಕೊಟ್ಟು ನೋಡಿ.ವರ್ಷಕ್ಕೆ ಒಂದೂಕಾಲು ಲಕ್ಷ ರೂಪಾಯಿ ಮನೆ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಬಂದು ಬೀಳತ್ತೆ.ಇಡೀ ದೇಶದ ರೈತರ ಸಾಲ ಮನ್ನಾ ಆಗತ್ತೆ ನಿರುದ್ಯೋಗಿ ಯುವಕ/ ಯುವತಿಯರಿಗೆ ಒಂದು ಲಕ್ಷ ರೂಪಾಯಿ ಕೊಡ್ತೇವೆ.ರೈತರು ಬೆಳೆದ ಬೆಳೆಗಳಿಗೆ ಖಚಿತವಾದ ಬೆಂಬಲ ಬೆಲೆ ಕೊಡುತ್ತೇವೆಇಂಥಾ 25 ಗ್ಯಾರಂಟಿಗಳನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರು ಘೋಷಿಸಿ ಪತ್ರಕ್ಕೆ ಸಹಿ ಹಾಕಿದ್ದಾರೆ  ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೀಕ್ಷಾಭೂಮಿ ಯಾತ್ರೆಗೆ ಡಾ.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಆ.19 ರಂದು ಉದ್ಯೋಗ ನೇರ ಸಂದರ್ಶನನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ?ವಚನ-:   -ಡಕ್ಕೆಯ ಬೊಮ್ಮಣ್ಣರಾಷ್ಟ್ರ ಧ್ವಜವನ್ನು ನೆಲಕ್ಕೆ ಹಾಸಿ ಇಸ್ಪೀಟ್ ಆಡಿದ ಕಿಡಿಗೇಡಿಗಳುಹಾವೇರಿ: ಭಾರತದಲ್ಲಿರುವ ಎಲ್ಲರೂ ಹಿಂದೂಗಳು ಎಂದ ವಚನಾನಂದ ಶ್ರೀಬೆಂಗಳೂರು: ಕೆಫೆ ನಂತರ ಥಿಯೇಟರ್ ನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಕೃತಿಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1500 ರೂಪಾಯಿ ಸ್ಕಾಲರ್ಶಿಪ್! ಇಲ್ಲಿದೆ ಸಂಪೂರ್ಣ ಮಾಹಿತಿದಶಕಗಳ ಬಳಿಕ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರಪ್ರಶಸ್ತಿ ಘೋಷಣೆ ‘ಕಾಂತಾರ’ ಸಿನಿಮಾ ನಟ ರಿಷಬ್‌ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿಉಚಿತ ಹೊಲಿಗೆ ಯಂತ್ರ ವಿತರಣೆ..! ಈಗಾಗಲೇ ಅರ್ಜಿ ಸಲ್ಲಿಸಿ, ಆಗಸ್ಟ್ 31 ಕೊನೆಯ ದಿನಾಂಕ