LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನೀವು ಭಾರತದ ಹೆಮ್ಮೆ, ಚಾಂಪಿಯನ್‌ಗಳಲ್ಲೇ ಚಾಂಪಿಯನ್' - ವಿನೇಶ್ ಪೋಗಟ್‌ಗೆ ಸಮಾಧಾನ ಹೇಳಿದ ಪ್ರಧಾನಿ ಮೋದಿ

ನವದೆಹಲಿ: ಪ್ಯಾರಿಸ್​ ಒಲಿಂಪಿಕ್ಸ್‌ನ ಕುಸ್ತಿ ವಿಭಾಗದ ಮಹಿಳೆಯರ 50 ಕೆಜಿ ಸ್ಪರ್ಧೆಯಲ್ಲಿ ಫೈನಲ್​ಗೆ ಲಗ್ಗೆ ಇಟ್ಟು ಚಿನ್ನದ ಪದಕದ ನಿರೀಕ್ಷೆ ಮೂಡಿಸಿದ್ದ ಭಾರತದ ವಿನೇಶ್​ ಪೋಗಟ್​, ತೂಕದ ಕಾರಣದಿಂದ ಒಲಿಂಪಿಕ್ಸ್​ನಿಂದ ಅನರ್ಹಗೊಳ್ಳುವ ಮೂಲಕ ನಿರಾಸೆ ಮೂಡಿಸಿದ್ದಾರೆ. ಇಂತಹ ಸಂದರ್ಭದಲ್ಲಿ ವಿನೇಶ್ ಪೋಗಟ್‌ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಮಾಧಾನ ಹೇಳಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಅವರಿಗೆ ವಿನೇಶ್​ ಪೋಗಟ್​ ಅವರಿಗೆ ಬೆಂಬಲ ಸೂಚಿಸಿ ಪೋಸ್ಟ್‌ ಹಾಕಿ ಸ್ಫೂರ್ತಿದಾಯಕ ಮಾತುಗಳನ್ನು ಆಡಿದ್ದಾರೆ. 'ವಿನೇಶ್, ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್! ನೀವು ಭಾರತದ ಹೆಮ್ಮೆ ಮತ್ತು ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಇಂದಿನ ಹಿನ್ನಡೆ ನನಗೆ ನೋವು ತಂದಿದೆ. ಇಲ್ಲಿನ ಪದಗಳು ನಾನು ಅನುಭವಿಸುತ್ತಿರುವ ಹತಾಶೆಯ ಅರ್ಥವನ್ನು ವ್ಯಕ್ತಪಡಿಸಬಹುದು ಎಂದು ನಾನು ಭಾವಿಸುತ್ತೇನೆ. ಅದೇ ಸಮಯದಲ್ಲಿ, ನೀವು ಅಚಲ ಮನೋಭಾವವನ್ನು ಸಾರುತ್ತೀರಿ ಎಂದು ನನಗೆ ತಿಳಿದಿದೆ. ಸವಾಲುಗಳನ್ನು ಎದುರಿಸುವುದು ಯಾವಾಗಲೂ ನಿಮ್ಮ ಸ್ವಭಾವವಾಗಿದೆ. ಇನ್ನಷ್ಟು ಸ್ಟ್ರಾಂಗ್‌ ಆಗಿ ಮರಳಿ. ನಾವೆಲ್ಲರೂ ನಿಮ್ಮ ಬೆಂಬಲಕ್ಕೆ ಅಚಲವಾಗಿ ನಿಂತಿದ್ದೇವೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST