LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೂತನ ಸಂಸತ್ ಭವನದಲ್ಲಿ ಸಿಬ್ಬಂದಿಗೆ ಹೊಸ ಡ್ರೆಸ್ ಕೋಡ್

ನವದೆಹಲಿ: ಸೆಪ್ಟೆಂಬರ್ 18-22 ರವರೆಗೂ ಸಂಸತ್‌ನ ವಿಶೇಷ ಅಧಿವೇಶನ ನಡೆಯಲಿದೆ. ಇದೇ ವೇಳೆ ಸಿಬ್ಬಂದಿಯ ಸಮವಸ್ತ್ರ ಬದಲಾವಣೆಗೂ ಸರ್ಕಾರ ನಿರ್ಧರಿಸಿದೆ. ಸೆಪ್ಟೆಂಬರ್ 18 ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ದಿನದಂದು ಸಣ್ಣ ಪೂಜೆಯ ಬಳಿಕ ಹೊಸ ಸಂಸತ್ ಭವನಕ್ಕೆ ಔಪಚಾರಿಕ ಪ್ರವೇಶ ನಡೆಯಲಿದೆ.

ಹೊಸ ಸಂಸತ್‌ನಲ್ಲಿ ಹೊಸ ಡ್ರೆಸ್ ಕೋಡ್‌ನೊಂದಿಗೆ ಸಿಬ್ಬಂದಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ. ಸಂಸತ್ ಭವನದ ಸಿಬ್ಬಂದಿ ಗಾಢ ಗುಲಾಬಿ ಬಣ್ಣದ ನೆಹರು ಜಾಕೆಟ್ ಮತ್ತು ಖಾಕಿ ಬಣ್ಣದ ಪ್ಯಾಂಟ್ ಧರಿಸಲಿದ್ದಾರೆ. ಇವರು ಧರಿಸಲಿರುವ ಶರ್ಟ್ ಕಮಲದ ಹೂವಿನ ಶೈಲಿಯಲ್ಲಿ ವಿನ್ಯಾಸಗೊಳಿಸಿದೆ. ಈ ಸಮವಸ್ತ್ರವನ್ನು ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಫ್ಯಾಶನ್ ಟೆಕ್ನಾಲಜಿ ಸಿದ್ದಗೊಳಿಸಿದೆ.

ಉಭಯ ಸದನಗಳಲ್ಲಿನ ಮಾರ್ಷಲ್‌ಗಳ ಉಡುಗೆಯನ್ನೂ ಬದಲಾಯಿಸಲಾಗಿದೆ. ಅವರು ಮಣಿಪುರಿ ಪೇಟವನ್ನು ಧರಿಸಲಿದ್ದಾರೆ. ಸಂಸತ್ ಭವನದ ಭದ್ರತಾ ಸಿಬ್ಬಂದಿಯ ಉಡುಗೆಯೂ ಬದಲಾಗಲಿದ್ದು, ಸಫಾರಿ ಸೂಟ್‌ಗಳ ಬದಲಿಗೆ, ಅವರಿಗೆ ಮಿಲಿಟರಿ ಉಡುಪು ಹೋಲುವ ಬಟ್ಟೆಯನ್ನು ನೀಡಲಾಗುತ್ತದೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಯುವನಿಧಿ ಯೋಜನೆ : ಅರ್ಜಿ ಆಹ್ವಾನ .!ಗ್ಯಾಸ್ ಬಳಕೆದಾರರೆ ಹಾಗಾದ್ರೆ,  ಆಧಾರ ಬಯೋಮೆಟ್ರಿಕ್: ಯಾವುದೇ ಗಡವು ಇಲ್ಲಹುದ್ದೆಗಳ ಆಯ್ಕೆ ಪಟ್ಟಿಗೆ ಆಕ್ಷೇಪಣೆg ಆಹ್ವಾನHDK, ಯತ್ನಾಳ್, ಅಶ್ವತ್ಥ ನಾರಾಯಣಗೆ ಬಿಗ್ ಶಾಕ್!ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?--ಅಂಬಿಗರ ಚೌಡಯ್ಯಅವರ ವಚನ …!ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆ