E-PAPER
17 Nov 2026, 12:19:50 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ನೂರಾರು ಜನರ ಭೇಟಿ; ಸ್ಥಳದಲ್ಲೇ ಅಧಿಕಾರಿಗಳಿಗೆ ಕರೆ ಮಾಡಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಸೂಚನೆ

ಜನಸ್ಪಂದನ: ಗೃಹ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ 

ಬೆಳಗಾವಿ-08:ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಬೆಳಗಾವಿಯ ತಮ್ಮ ಗೃಹ ಕಚೇರಿಯಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳು ಮತ್ತು ಸಮಸ್ಯೆಗಳನ್ನು ಆಲಿಸಿದರು.

ವಿವಿಧ ಗ್ರಾಮಗಳು ಹಾಗೂ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಜನರು ತಮ್ಮ ವೈಯಕ್ತಿಕ, ಸಾಮಾಜಿಕ ಮತ್ತು ಆಡಳಿತಾತ್ಮಕ ಸಮಸ್ಯೆಗಳನ್ನು ಗಮನಕ್ಕೆ ತಂದರು.
ಜನರು ಸಲ್ಲಿಸಿದ ಅಹವಾಲುಗಳನ್ನು ಆಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಕೇವಲ ಸಾಂತ್ವನ ಹೇಳುವುದಕ್ಕಷ್ಟೇ ಸೀಮಿತವಾಗದೆ, ಹಲವು ಪ್ರಕರಣಗಳಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸರ್ಕಾರಿ ಯೋಜನೆಗಳ ಅನುಷ್ಠಾನ, ಮೂಲಸೌಕರ್ಯ ಅಭಿವೃದ್ಧಿ, ಕಂದಾಯ ಇಲಾಖೆ, ಪಿಂಚಣಿ, ಕುಡಿಯುವ ನೀರು, ರಸ್ತೆ, ಆರೋಗ್ಯ ಹಾಗೂ ಇತರೆ ಸಾರ್ವಜನಿಕ ಸೇವೆಗಳಿಗೆ ಸಂಬಂಧಿಸಿದ ಅನೇಕ ಸಮಸ್ಯೆಗಳ ಕುರಿತು ಜನರು ಮನವಿ ಸಲ್ಲಿಸಿದರು.

ಗೃಹ ಕಚೇರಿಯಲ್ಲಿ ನಡೆದ ಜನಸಂಪರ್ಕ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿ ತಮ್ಮ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮನವಿ ಸಲ್ಲಿಸಿದರು.
ಹಲವಾರು ಪ್ರಕರಣಗಳಲ್ಲಿ ತಕ್ಷಣವೇ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಾಯಿತು.
ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಅವರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಸಾರ್ವಜನಿಕ ಸೇವೆಗೆ ಬದ್ಧತೆಯನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಂದಿನಂತೆ ಪ್ರದರ್ಶಿಸಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಜರಿದ್ದರು..

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.