LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೌಕಾಪಡೆಯ ನೂತನ ಮುಖ್ಯಸ್ಥ ದಿನೇಶ್ ತ್ರಿಪಾಠಿ ನೇಮಕ

ನವದೆಹಲಿ: ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ ಅವರನ್ನು ನೇಮಕಗೊಂಡಿದ್ದಾರೆ. ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ ತ್ರಿಪಾಠಿ ಅವರು ವೈಸ್ ಅಡ್ಮಿರಲ್ ಆರ್ ಹರಿ ಕುಮಾರ್ ಅವರ ನಂತರ ಏಪ್ರಿಲ್ 30 ರಂದು ತಮ್ಮ ಹೊಸ ಜವಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.40 ವರ್ಷಗಳ ಸುದೀರ್ಘ ವೃತ್ತಿ ಜೀವನದಲ್ಲಿ ಹಲವು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅಡ್ಮಿರಲ್ ದಿನೇಶ್ ಇದೀಗ ನೌಕಾಪಡೆಯ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಸಿದ್ಧರಾಗಿದ್ದಾರೆ.

ತ್ರಿಪಾಠಿ ಪ್ರಸ್ತುತ ನೌಕಾಪಡೆಯ ಉಪ ಮುಖ್ಯಸ್ಥರಾಗಿದ್ದಾರೆ. ಗುರುವಾರ ಹೊರಡಿಸಿದ ಹೇಳಿಕೆಯ ಪ್ರಕಾರ, ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಏಪ್ರಿಲ್ 30 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ನೌಕಾಪಡೆಯ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು, ಅಡ್ಮಿರಲ್ ತ್ರಿಪಾಠಿ ಅವರು ಪಶ್ಚಿಮ ನೌಕಾ ಕಮಾಂಡ್‌ನ ಫ್ಲಾಗ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ ಆಗಿಯೂ ಸೇವೆ ಸಲ್ಲಿಸಿದರು. ತ್ರಿಪಾಠಿ ಅವರು ಅಡ್ಮಿರಲ್ ಆರ್ ಹರಿಕುಮಾರ್ ಅವರ ಸ್ಥಾನವನ್ನು ತುಂಬಲಿದ್ದಾರೆ.

ವೈಸ್ ಅಡ್ಮಿರಲ್ ದಿನೇಶ್ ತ್ರಿಪಾಠಿ, 15 ಮೇ 1964 ರಂದು ಜನಿಸಿದ್ದು, ಜುಲೈ 1, 1985 ರಂದು ನೌಕಾಪಡೆಗೆ ಸೇರಿದರು. ಅವರು ರೇವಾದ ಸೈನಿಕ್ ಸ್ಕೂಲ್ ಮತ್ತು ಖಡ್ಗ್ವಾಸ್ಲಾದ ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

ದಿನೇಶ್ ತ್ರಿಪಾಠಿ ಅವರು ಸಂವಹನ ಮತ್ತು ಎಲೆಕ್ಟ್ರಾನಿಕ್ ವಾರ್ಫೇರ್ ಪರಿಣಿತರಾಗಿರುವ ಇವರು, ಸುಧಾರಿತ ನೌಕಾ ಹಡಗುಗಳಲ್ಲಿ ಸಿಗ್ನಲ್ ಕಮ್ಯುನಿಕೇಷನ್ ಅಧಿಕಾರಿ ಮತ್ತು ಎಲೆಕ್ಟ್ರಾನಿಕ್ ವಾರ್ಫೇರ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವೈಸ್ ಅಡ್ಮಿರಲ್ ತ್ರಿಪಾಠಿ ಅವರು ತಮ್ಮ ಅತ್ಯುತ್ತಮ ಸೇವೆಗಾಗಿ ಅತಿ ವಿಶಿಷ್ಟ ಸೇವಾ ಪದಕ ಮತ್ತು ನೌಕಾಪಡೆಯ ಪದಕವನ್ನು ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 ರಾಜ್ಯಾದ್ಯಂತ ಇನ್ನೂ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ .!ಹವಾಮಾನ ಇಲಾಖೆಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನಎಲ್ಲರಿಗೂ ನಮಸ್ಕಾರ ಇಂದಿನ ಸಂಚಿಕೆಯಲ್ಲಿ ಕೊಟ್ಟಂತಹ ಹಣ ವಾಪಸ್ ಬರಬೇಕು ಎಂದರೆ ಈ ಚಿಕ್ಕ ಕೆಲಸ ಮಾಡಿ ಸಾಕು.!ಕಂಪ್ಯೂಟರ್ ಆಧಾರಿತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನವೃತ್ತಿ ಮತ್ತು ವ್ಯಾಪಾರ ಅಭಿವೃದ್ಧಿಗಾಗಿ ಈ ಸಸ್ಯಗಳನ್ನು ಮನೆಯಲ್ಲಿ ಇರಿಸಿವಚನ   --ಜೇಡರ ದಾಸಿಮಯ್ಯಲಿಪ್‌ ಲಾಕ್‌ ಮಾಡಲು ಹೋಗಿ ಪ್ರಿಯತಮೆಯ ಬಾಯಿಗೆ ವಾಂತಿ ಮಾಡಿದ ಯುವಕ..! ವಿಡಿಯೋ ಇಲ್ಲಿದೆಹತ್ತನೇ ತರಗತಿ 6 ವಿದ್ಯಾರ್ಥಿಗಳು ನಿಗೂಢ ನಾಪತ್ತೆ..!ಬಿಜೆಪಿ ಸೇರ್ಪಡೆ ವದಂತಿಗೆ ತೆರೆ : ಹೊಸ ಪಕ್ಷ ಕಟ್ಟಲು ಹೊರಟ 'ಚಂಪೈ ಸೊರೆನ್'ಗುಡ್ ನ್ಯೂಸ್: ಹೊಸ ಪಡಿತರ ಚೀಟಿ ಅರ್ಜಿ ಮತ್ತು ವಿತರಣೆಗೆ..! ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ