ನ.10-11 ರಂದು ಈ ಭಾಗಗಳಲ್ಲಿ ಕರೆಂಟ್ ಇರುವುದಿಲ್ಲ.!
ದಾವಣಗೆರೆ :ಅತ್ತಿಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ, ನವಂಬರ್ 10 ಮತ್ತು 11 ರಂದು ಬೆಳಿಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಅತ್ತಿಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೋಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ವಿದ್ಯುತ್ ವ್ಯತ್ಯಯ: ಎಲೇಬೇತೂರು ಶಾಖಾ ವ್ಯಾಪ್ತಿಯ ಯರಗುಂಟೆ ವಿ.ವಿ ಕೇಂದ್ರದಿಂದ ಹೊರಡುವ ಚಿತ್ರಾನಹಳ್ಳಿ, ದೇವರಹಟ್ಟಿ ಅಮೃತನಗರ, ಮಾರ್ಗದಲ್ಲಿ ನವಂಬರ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು, ದೇವರಹಟ್ಟಿ, ಬಿ.ಕಲ್ಪನಹಳ್ಳಿ, ಚಿತ್ರಾನಹಳ್ಳಿ, ಅಮೃತನಗರ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.