E-PAPER
17 Nov 2026, 12:18:30 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಂಚ ಗ್ಯಾರಂಟಿ ಯೋಜನೆಗಳಿಂದ ಸಂಜೀವಿನಿಯಾದ ಜನರ ಬದುಕು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಚಿಕ್ಕಮಗಳೂರು-25:ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಮಹಿಳೆಯರು ಹಾಗೂ‌ ಬಡವರ ಮೇಲೆ ಕಾಳಜಿ ಹೊಂದಿರುವ ಪಕ್ಷ ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌

ಚಿಕ್ಕಮಗಳೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ವತಿಯಿಂದ ಕುವೆಂಪು ಕಲಾಮಂದಿರದಲ್ಲಿ ಶನಿವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಚುನಾವಣೆ ಪೂರ್ವ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದರು.

ಕೊರೋನಾ ಬಂದು ಹೋದ ಮೇಲೆ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿತು, ರೈತರು ಉಪಯೋಗಿಸುವ ರಸಗೊಬ್ಬರ, ಸಿಲಿಂಡರ್, ದಿನ ಬಳಕೆ ವಸ್ತುಗಳನ್ನು ಕೊಂಡುಕೊಳ್ಳುವುದೇ ದುಸ್ತರವಾಗಿತ್ತು.‌ ಗೃಹಲಕ್ಷ್ಮಿ ಯೋಜನೆಯ ಮೂಲಕ ನೀಡುವ ಎರಡು ಸಾವಿರ ರೂಪಾಯಿ ಎಷ್ಟೋ ಕುಟುಂಬಗಳಿಗೆ ಅನುಕೂಲವಾಗಿದೆ ಎಂದು ಸಚಿವರು ಹೇಳಿದರು.

ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ರಾಜ್ಯದ ಸಿಎಂ ಹಾಗೂ ಡಿಸಿಎಂ ಯಜಮಾನಿಯರು ಅಂತ ಹೆಸರಿಟ್ಟರು. ಈಗಾಗಲೇ 19 ತಿಂಗಳ ಹಣ ಫಲಾನುಭವಿಗಳಿಗೆ ತಲುಪಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಜನರಿಗೆ ಆಶ್ರಯ‌ ನೀಡಿದ್ದು, ಆಸ್ಪತ್ರೆ, ಸ್ಕೂಲ್‌, ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರಗಳು. ಬಡವರಿಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದೇ ಕಾಂಗ್ರೆಸ್ ಎಂದು ಹೇಳಿದರು.

ರಾಜಕೀಯವಾಗಿ ಇಂದಿರಾಗಾಂಧಿ ಅವರಿಗೆ ಪುನರ್ಜನ್ಮ ನೀಡಿದ್ದು ಚಿಕ್ಕಮಗಳೂರು ಜಿಲ್ಲೆ, ಐವತ್ತು ವರ್ಷಗಳ ಹಿಂದೆ ಅಂಗನವಾಡಿ ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಇದೇ ವರ್ಷದ ಅಕ್ಟೋಬರ್ ತಿಂಗಳಲ್ಲಿ ಬೆಂಗಳೂರು ಅಥವಾ ಮೈಸೂರಿನಲ್ಲಿ ಅದ್ದೂರಿಯಾಗಿ ಸುವರ್ಣ ಮಹೋತ್ಸವ ಮಾಡಲಾಗುವುದು ಎಂದರು.

ಜನರ ಅಭಿವೃದ್ಧಿಗಾಗಿ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಹಾಕಲಾಗುತ್ತಿದೆ. ನೇರವಾಗಿ ಎರಡು ಸಾವಿರ ರೂ ಜನರಿಗೆ ತಲುಪುತ್ತಿದೆ, ಗ್ಯಾರಂಟಿ ಹೆಸರನ್ನು ಕೆಡಿಸಲು ವಿರೋಧ ಪಕ್ಷಗಳಿಂದ ಅಪಪ್ರಚಾರ ನಡೆಯಿತು. ಗ್ಯಾರಂಟಿ ಯೋಜನೆಗಳನ್ನು ಬಂದ್ ಮಾಡುವ ಧೈರ್ಯ ಬಿಜೆಪಿಯವರಿಗಿಲ್ಲ, ಇದೇ ಬಿಜೆಪಿಯವರು ಮಹಾರಾಷ್ಟ್ರ, ದೆಹಲಿ,‌ ಯುಪಿಯಲ್ಲಿ ನಮ್ಮ ಯೋಜನೆಗಳನ್ನು ನಕಲು ಮಾಡುತ್ತಿದ್ದಾರೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಇದುವರೆಗೂ ಒಂದು ಕಂತಿನ‌ ಲಾಡ್ಲಿ ಬೆಹನ್ ಯೋಜನೆಯ ಹಣ ಕೊಟ್ಟಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನೂತನವಾಗಿ 160 ಅಂಗನವಾಡಿ ಶಿಕ್ಷಕಿಯರ ನೇಮಕ ಮಾಡಲಾಗಿದ್ದು, ಸಂಪೂರ್ಣ ಅಧಿಕಾರಿಗಳಿಂದ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ಶೀಘ್ರದಲ್ಲೇ 130 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಲಾಗುವುದು. ಊಟದ ಜೊತೆ ಉತ್ತಮ ಶಿಕ್ಷಣ ನೀಡುವುದೇ ನಮ್ಮ ಉದ್ದೇಶ ಎಂದರು.

ಈ ವೇಳೆ ಚಿಕ್ಕಮಗಳೂರು ಕ್ಷೇತ್ರದ ಶಾಸಕರಾದ ಎಚ್.ಡಿ.ತಮ್ಮಯ್ಯ, ರಾಜೇಗೌಡ, ನಯನಾ ಮೋಟಮ್ಮ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಎಚ್.ಹರೀಶ್, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಸಿ.ಶಿವಾನಂದಸ್ವಾಮಿ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಕೀರ್ತನಾ, ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.