LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಪಕ್ಷದ ನಾಯಕರಾಗಿ ಕೆಲಸ ಮಾಡುವವರಿಂದ ಇಂತಹ ಮಾತು ಬರಬಾರದಿತ್ತು’- ಎಂಬಿ ಪಾಟೀಲ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿರುವ ಬಿಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಹೇಳಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಹರಿಪ್ರಸಾದ್ ಪಕ್ಷದ ಹಿರಿಯ ನಾಯಕರು. ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯಸಭಾ ಸದಸ್ಯ, ವಿಧಾನ ಪರಿಷತ್ತಿನಲ್ಲಿ ಪಕ್ಷದ ನಾಯಕರಾಗಿ ಕೆಲಸ ಮಾಡಿರುವವರು. ಅವರಿಂದ ಇಂತಹ ಮಾತು ಬರಬಾರದಿತ್ತು. ಅವರ ಮಾತುಗಳನ್ನು ಕೇಳಿಸಿಕೊಂಡು ಪಕ್ಷದ ರಾಷ್ಟ್ರೀಯ ನಾಯಕರು ಸುಮ್ಮನೆ ಕೂರುವುದಿಲ್ಲ ಎಂದಿದ್ದಾರೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲಾ, ವೇಣುಗೋಪಾಲ್ ಎಲ್ಲರೂ ಹರಿಪ್ರಸಾದ್ ಅವರಿಗೆ ಆತ್ಮೀಯರು. ಹೀಗಿರುವಾಗ ಅವರು ಎಲ್ಲ ವಿಚಾರಗಳನ್ನೂ ಪಕ್ಷದ ಒಳಗೇ ಮಾತನಾಡಬೇಕಿತ್ತು. ಆದರೆ ಅವರು ಬೀದಿಗೆ ಹೋಗಿದ್ದಾರೆ. ಇದು ಸರಿಯಲ್ಲ. ಇದರ ಪರಿಣಾಮಗಳನ್ನು ಅವರು ಎದುರಿಸಬೇಕಾಗುತ್ತದೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆಸಾವೀಗೀಡಾದ ಕಾಶ್ಮೀರಿ ನಾಗರೀಕರ ಕುಟುಂಬಗಳನ್ನು ಭೇಟಿ ಮಾಡಿದ ರಾಜನಾಥ್ ಸಿಂಗ್; ಸೇನೆಗೆ ಕಿವಿಮಾತು