LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತಿ ಪತ್ನಿಯರ ಅನಧಿಕೃತವಾಗಿ ಹಣಕ್ಕಾಗಿ ಕಾಲ್ ಡೀಟೇಲ್ಸ್ ನೀಡ್ತಿದ್ದ ಪೊಲೀಸ್ ಕಾನ್ಸ್‌ಟೇಬಲ್‌ ಅರೆಸ್ಟ್..!

ಬೆಂಗಳೂರು: ಸಿಸಿಬಿ ಹಾಗೂ ವಿಜಯನಗರ ಉಪವಿಭಾಗದ ಪೊಲೀಸರು ಕಾರ್ಯಾಚರಣೆಯಲ್ಲಿ ಬಯಲಾಗಿದ್ದ ಖಾಸಗಿ ಡಿಟೆಕ್ಟಿವ್ ಏಜೆನ್ಸಿಗಳ ಕಳ್ಳಾಟದಲ್ಲಿ ಸಿಸಿಬಿ ಪೊಲೀಸರು ಸಿಐಡಿ ಪೊಲೀಸ್ ಸಿಬ್ಬಂದಿಯನ್ನ ಬಂಧಿಸಿದ್ದಾರೆ. ಕಳೆದ ಮೇ‌ ತಿಂಗಳಲ್ಲಿ ಮಹಾನಗರಿ ಡಿಟೆಕ್ಟಿವ್ & ಸೆಕ್ಯುರಿಟಿ ಸಲ್ಯೂಷನ್ ಪ್ರೈವೇಟ್ ಲಿಮಿಟೆಡ್, ರಾಜಧಾನಿ ಕಾರ್ಪೊರೇಟ್ ಸರ್ವಿಸ್ ಹೆಸರಿನ ಕಚೇರಿಗಳಲ್ಲಿ ಪರಿಶೀಲನೆ ನಡೆಸಿ ಅನಧಿಕೃತವಾಗಿ ಸಿಡಿಆರ್ ಪಡೆಯುತ್ತಿದ್ದ ಆರೋಪ ಹಿನ್ನೆಲೆ ಮೂರು ಪ್ರಕರಣಗಳನ್ನು ದಾಖಲಿಸಿದ್ದರು.

ಆಸಮಯದಲ್ಲಿ ಪುರುಷೋತ್ತಮ, ಸತೀಶ್ ಕುಮಾರ್, ತಿಪ್ಪೇಸ್ವಾಮಿ, ಮಹಾಂತಗೌಡ, ರೇವಂತ, ಗುರುಪಾದಸ್ವಾಮಿ, ಶ್ರೀನಿವಾಸ ಮತ್ತು ಭರತ್ ಎಂಬುವರನ್ನು ಬಂಧಿಸಲಾಗಿತ್ತು. ಸದ್ಯ ಈ ತಂಡದ ಕಿಂಗ್ ಪಿನ್ ಆಂಧ್ರದ ನಾಗೇಶ್ವರ ರೆಡ್ಡಿಗೆ ಎಂಬಾತನನ್ನ ಬಂಧಿಸಲಾಗಿದೆ. ಇನ್ನು ಈ ನಾಗೇಶ್ವರ ರೆಡ್ಡಿಗೆ ಸಿಡಿ ಆರ್ ನೀಡುತ್ತಿದ್ದ ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಎಂಬಾತನನ್ನ ಬಂಧಿಸಲಾಗಿದೆ.

ಮುನಿರತ್ನ ಹಲವು ವರ್ಷಗಳಿಂದ ಸಿಐಡಿ ಟೆಕ್ನಿಕಲ್ ಸೆಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದ. ಹಿರಿಯ ಅಧಿಕಾರಿಗಳು ಕೇಸ್ ಸಂಬಂಧ ಅಧಿಕೃತವಾಗಿ ಸಿಡಿಆರ್ ಪಡೆಯಲು ಸರ್ವಿಸ್ ಪ್ರವೈಡ್‌ಗಳಿಗೆ ನೀಡುವ ಪತ್ರದಲ್ಲಿ ತನಗೆ ಬೇಕಾದ ಫೋನ್ ನಂಬರ್‌ಗಳನ್ನ ಸೇರಿಸಿ ಸಿಡಿಆರ್ ಪಡೆಯುತ್ತಿದ್ದ. ಸಿಡಿಆರ್ ಬಂದ ನಂತರ ಅಧಿಕೃತವಾದ ಸಿಡಿಆರ್‌ಗಳನ್ನ ಅಧಿಕಾರಿಗಳಿಗೆ ನೀಡಿ ಅನಧಿಕೃತ ಸಿಡಿಆರ್‌ಗಳನ್ನ ನಾಗೇಶ್ವರ ರೆಡ್ಡಿಗೆ ನೀಡ್ತಿದ್ದ. ಗಂಡ ಹೆಂಡತಿ, ಪ್ರೇಮಿಗಳ ನಡುವಿನ ಅನುಮಾಕ್ಕೆ ಹೆಚ್ಚು ಸಿಡಿಆರ್ ಗಳ ಬಳಕೆ. ಇನ್ನು ಈ ಸಿಡಿಆರ್ ಪಡೆಯುತ್ತಿದ್ದವರು ಯಾರು ಅಂತ ನೋಡೊದಾದ್ರೆ ಹೆಚ್ಚಾಗಿ ಗಂಡ ಅಥವಾ ಹೆಂಡತಿ‌ ಮತ್ತು ಪ್ರೇಮಿಗಳು ಸಂಬಂಧದಲ್ಲಿ ಅನುಮಾನ ಮೂಡಿ ತಮ್ಮ ಪ್ರೀತಿ ಪಾತ್ರರ ಯಾರ ಸಂಪರ್ಕದಲ್ಲಿದ್ದಾರೆ ಅನ್ನೋದನ್ನ ತಿಳಿದುಕೊಳ್ಳಲು ಈ ಕಾಲ್ ಡಿಟೈಲ್‌ ನ ಅನಧಿಕೃತವಾಗಿ ಪಡೆದುಕೊಳ್ಳುತ್ತಿದ್ರು ಎನ್ನಲಾಗ್ತಿದೆ. ಅಷ್ಟೇ ಅಲ್ಲದೆ ಬ್ಯುಸಿನೆಸ್ ಮೆನ್ ಗಳ ಕೆಲ ರಾಜಕೀಯ ವ್ಯಕ್ತಿಗಳು ತಮ್ಮ ಎದುರಾಳಿಗಳ ಸಿಡಿಆರ್ ಪಡೆದಿರೋ ಶಂಕೆ ವ್ಯಕ್ತವಾಗಿದೆ. ಇದ್ರಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ಪತ್ನಿಯರು ತಮ್ಮ ಪತಿಯಕಾಲ್ ಡೀಟೇಲ್ಸ್ ಪಡೆದಿದ್ದಾರಂತೆ. ಸದ್ಯ ನಾಗೇಶ್ವರ ರೆಡ್ಡಿ ಮತ್ತು ಪೊಲೀಸ್ ಸಿಬ್ಬಂದಿ ಮುನಿರತ್ನ ಬಂಧಿಸಿರೋ ಸಿಸಿಬಿ ಹಚ್ಚಿನ ವಿಚಾರಣಗೆ ಒಳಪಡಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆ