LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪತ್ನಿ, ಮಗುವಿಗೆ ವಿಷ ನೀಡಿ, ರೈಲಿನಡಿಗೆ ತಲೆಕೊಟ್ಟು ಆತ್ಮಹತ್ಯೆ :ಮಂಗಳೂರಿನಲ್ಲಿ ನಡೆದ ದುರಂತ ಘಟನೆ

ಮಂಗಳೂರು : ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಪಕ್ಷಿಕೆರೆ ಜಲಜಾಕ್ಷಿ ರೆಸಿಡೆನ್ಸಿ ಬಹು ಮಹಡಿ ಕಟ್ಟಡದಲ್ಲಿ ವಾಸವಿದ್ದ ವ್ಯಕ್ತಿನೋರ್ವ ಪತ್ನಿ, ಮಗುವನ್ನು ಹತ್ಯೆಗೈದು ತಾನೂ ರೈಲಿನಡಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ಕಾರ್ತಿಕ್ ಭಟ್ (32) ಎಂದು ಗುರುತಿಸಲಾಗಿದ್ದು, ಪತ್ನಿ ಪ್ರಿಯಾಂಕ (28), ಮಗು ಹೃದಯ್ (4) ಹತ್ಯೆಗೀಡಾದ ದುರ್ದೈವಿಗಳು ಎಂದು ತಿಳಿದುಬಂದಿದೆ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ.

ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

ಶುಕ್ರವಾರ ಮಧ್ಯಾಹ್ನ ವ್ಯಕ್ತಿನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡವನು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು, ಮನೆಗೆ ಬಂದಾಗ ಪತ್ನಿ ಮಗು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ಎಸಿಪಿ ಶ್ರೀಕಾಂತ್, ಮುಲ್ಕಿ ಪೊಲೀಸ್ ಇನ್ಸ್‌ಪೆಕ್ಟರ್ ವಿದ್ಯಾಧರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ತನಿಖೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹಸದನದಲ್ಲೂ ‌ಸುದ್ದಿಯಾದ ಧರ್ಮಸ್ಥಳ ಪ್ರಕರಣ: ಗೃಹ ಸಚಿವರು ಹೇಳಿದ್ದೇನು ಗೊತ್ತಾ?'ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ'- ಪರಮೇಶ್ವರ್