LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಮೇಶ್ವರ್‌ರನ್ನು ಸಿಎಂ ಅಥವಾ ಡಿಸಿಎಂ ಮಾಡಬಹುದಿತ್ತಲ್ವಾ.? - ಸಿದ್ದರಾಮಯ್ಯ ವಿರುದ್ಧ ಹರಿಪ್ರಸಾದ್ ಗರಂ

ಬೆಂಗಳೂರು: ಸಿದ್ದರಾಮಯ್ಯ ಅವರು ದಲಿತ ನಾಯಕರನ್ನು ಕಡೆಗಣಿಸಿದ್ದಾರೆ. ದಲಿತರನ್ನು ಸಿಎಂ ಮಾಡುವುದನ್ನು ಮರೆತು ಅವರನ್ನು ಕೆಳಗಿಳಿಸಲಾಗಿದೆ. ಕರ್ನಾಟಕದಲ್ಲಿ ಡಾ.ಜಿ.ಪರಮೇಶ್ವರ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಉಪಮುಖ್ಯಮಂತ್ರಿಯಾಗಿದ್ದ ಅವರು, ಸಿಎಂ ಆಗುವ ಎಲ್ಲಾ ಗುಣಗಳನ್ನು ಹೊಂದಿದ್ದರು. ಆದರೆ ಅವರನ್ನು ಕೆಳಗಿಳಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆ (ಶನಿವಾರ) ನಡೆದ ಬಿಲ್ಲಗ-ಈಡಿಗ ಮತ್ತು ನಾಮಧಾರಿ ಬೆಂಬಲಿಗರ ಶಕ್ತಿ ಪ್ರದರ್ಶನ ಕಾರ್ಯಕ್ರಮದಲ್ಲಿ ಬಿ.ಕೆ.ಹರಿಪ್ರಸಾದ್ ಅವರು ಸಿದ್ದರಾಮಯ್ಯ ಅವರನ್ನು ಹೆಸರಿಸದೆ ತರಾಟೆಗೆ ತೆಗೆದುಕೊಂಡರು. ಪರಮೇಶ್ವರ್‌ ಅವರಿಗೆ ಉಪ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಬೇಕಿತ್ತು. ಸತೀಶ್ ಜಾರಕಿಹೊಳಿ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬಹುದಿತ್ತು, ಆದರೆ ಚುನಾವಣೆಯ ನಂತರ ಅಂತಹ ಆಲೋಚನೆಗಳು ಅವರ ಮನಸ್ಸಿನಲ್ಲಿ ಇರಲಿಲ್ಲ ಎಂದು ಹರಿಪ್ರಸಾದ್ ಹೇಳಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಲ್ವರ ಕೊಲೆ ಆರೋಪಿ ಚೌಗುಲೆ ಜಾಮೀನು ಅರ್ಜಿ ತಿರಸ್ಕೃತ'ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದು ಬಿಜೆಪಿಯವರಿಗೆ ನುಂಗಲಾರದ ತುತ್ತಾಗಿದೆ': ಸಿಎಂ ವ್ಯಂಗ್ಯ'ರಾಮ ಮಂದಿರ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಿಕೊಳ್ಳುವುದಿಲ್ಲ'- ಪ್ರಹ್ಲಾದ್ ಜೋಶಿಅಯೋಧ್ಯೆ ಮಹರ್ಷಿ ವಾಲ್ಮೀಕಿ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆದಕ್ಷಿಣ ಕನ್ನಡದ ನ್ಯಾಶನಲ್ ಹೈವೇ ಅಭಿವೃದ್ದಿ , 957.39 ಕೋ.ರೂ.ವೆಚ್ಚದ 2 ಯೋಜನೆಗಳಿಗೆ ಅನುಮೋದನೆ..!ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಜ. 17ರಿಂದ ಆರಂಭಕೋವಿಡ್ ನ ಜೆಎನ್1 ರೂಪಾಂತರಿ ಸೋಂಕು :ರಾಜ್ಯದಲ್ಲಿ ಜ.2 ರಿಂದ ಲಸಿಕಾ ಅಭಿಯಾನವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳ ಭರ್ತಿ..!ಇಂದೇ ಅರ್ಜಿಯನ್ನು ಸಲ್ಲಿಸಿಚಹಾದಂಗಡಿಗೆ ನುಗ್ಗಿದ ಟ್ರಕ್: 5 ಮಂದಿ ದುರ್ಮರಣ, ಹಲವರಿಗೆ ಗಾಯಮನೆಯಲ್ಲೇ ತಯಾರಿಸಿ ಇನ್ ಸ್ಟಂಟ್ ‘ಜಿಲೇಬಿ’