LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಿಷತ್ ಚುನಾವಣೆಯಲ್ಲಿ ಕಾಂಗ್ರೇಸ್‌ಗೆ ಅನುಕೂಲಕರ ವಾತಾವರಣವಿದೆ- ಸಿಎಂ

ಬೆಂಗಳೂರು: ಶಿಕ್ಷಕರು ಮತ್ತು ನಾಡಿನ ಪದವೀಧರರು ನಾಡಿನ ಅಭಿವೃದ್ಧಿ ಪರವಾಗಿ ಇದ್ದಾರೆ. ಹೀಗಾಗಿ ಅವರೆಲ್ಲಾ ನಮ್ಮ ಪರವಾಗಿರುವುದರಿಂದ ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಅನುಕೂಲಕರ ವಾತಾವರಣವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ನಡೆದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾತನಾಡಿದ ಅವರು,ಜನವರಿಯಿಂದ ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಕಾರ್ಯಕ್ರಮ ಆರಂಭವಾಗಲಿದೆ. ನಾವು ವಿದ್ಯಾವಂತ ಯುವಕ ಯುವತಿಯರಿಗೆ 24 ತಿಂಗಳ ಕಾಲ ಯುವನಿಧಿ ಕೊಡುವ ಜತೆಗೆ ಉದ್ಯೋಗ ಸೃಷ್ಟಿಗೆ ಹಲವು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದರು.

ಟಿಕೆಟ್ ಆಕಾಂಕ್ಷಿಗಳು ಶಿಕ್ಷಕ ಸದಸ್ಯರು ಮತ್ತು ಪದವೀಧರ ಸದಸ್ಯರ ಜತೆ ನಿರಂತರ ಸಂಪರ್ಕದಲ್ಲಿದ್ದು ಅವರ ಮಾತು ಮತ್ತು ಬೇಡಿಕೆಗಳನ್ನು ಕೇಳಿಸಿಕೊಂಡು ನಮಗೆ ತಿಳಿಸಿ. ನಾಡಿನ ಅಭಿವೃದ್ಧಿ ಒಂದೇ ನಮ್ಮ ಗುರಿ. ಇದಕ್ಕಾಗಿ ಪಕ್ಷ ಮತ್ತು ಸರ್ಕಾರ ಶ್ರಮಿಸಲಿದೆ. ಇದನ್ನು ಮತದಾರರಿಗೆ ಸರಿಯಾಗಿ ಅರ್ಥ ಮಾಡಿಸಿ ಚುನಾವಣೆಯಲ್ಲಿ ಗೆದ್ದು ಬನ್ನಿ ಎಂದು ಹಾರೈಸಿದರು.

ಟಿಕೆಟ್ ಆಕಾಂಕ್ಷಿಗಳು ಮತ್ತು ಎಲ್ಲಾ ಶಾಸಕರು ಮತ್ತು ಜಿಲ್ಲಾ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಅಭ್ಯರ್ಥಿಗಳ ಹೆಸರನ್ನು ಘೋಷಿಸುತ್ತೇವೆ. ಟಿಕೆಟ್ ಯಾರಿಗೇ ಸಿಕ್ಕರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಎಂದರು.

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸಚಿವ ರಾಮಲಿಂಗಾರೆಡ್ಡಿ ಅವರು ಉಪಸ್ಥಿತರಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆ