LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯು

ಮಧ್ಯಪ್ರದೇಶ: ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯರನ್ನು ಬಬ್ಲಿ ಮಸಾರೆ (17) ಹಾಗೂ ರಾಧಿಕಾ ಭಾಸ್ಕರ್ (17) ಎಂದು ಗುರುತಿಸಲಾಗಿದೆ.

ಹೊಸದಾಗಿ ನಿರ್ಮಿಸಲಾಗಿದ್ದ ಹಳಿ ಮೇಲೆ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ 10 ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದೆ.

ಟ್ಯೂಷನ್ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದ ಈ ವಿದ್ಯಾರ್ಥಿನಿಯರು ಕೈಲೋದ್ ಹಾಲಾ ಎಂಬ ಪ್ರದೇಶದ ಬಳಿ ನಿರ್ಮಿಸಲಾಗಿದ್ದ ರೈಲು ಹಳಿಯನ್ನು ದಾಟುತ್ತಿದ್ದರು. ಈ ವೇಳೆ ಇದೇ ಹಳಿಯಲ್ಲಿ ಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲು ಡಿಕ್ಕಿಯಾಗಿ ವಿದ್ಯಾರ್ಥಿನಿಯರು ಸ್ಥಳದಲ್ಲೇ ಮೃತರಾಗಿದ್ದಾರೆ.

ಈ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಿದ್ಯಾರ್ಥಿಗಳ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, ಅವರ ಆದೇಶದ ಅನುಸಾರ ರೈಲ್ವೆ ರಕ್ಷಣಾ ಪಡೆಯ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ವಿಭಾಗೀಯ ರೈಲ್ವೆ ಮ್ಯಾನೇಜರ್ ರಜನೀಶ್ ಕುಮಾರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮೇ 20ರವರೆಗೆ ಕೇರಳದ ಕೆಲವು ರಾಜ್ಯಗಳಿಗೆ ರೆಡ್ ಅಲರ್ಟ್‌ ಘೋಷಣೆಮಾಲಿವಾಲ್ ಮೇಲೆ ಹಲ್ಲೆ ಕೇಸ್‌-ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ 5 ದಿನ ಕಸ್ಟಡಿಗೆಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್ ಜಾರಿಗೊಳಿಸಿದ ಕೋರ್ಟ್ವಾಹನ ಸವಾರರೇ ಗಮನಿಸ - ಜೂನ್ 1ರಿಂದ ಚಾಲನಾ ಪರವಾನಿಗೆ ನಿಯಮ ಬದಲಾವಣೆ'ದೇವರಾಜೇಗೌಡ ಮೋಸ್ಟ್ ಕ್ರಿಮಿನಲ್ ಮ್ಯಾನ್'- ಶಿವರಾಮೇಗೌಡಜಮ್ಮು-ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿ- ಬಿಜೆಪಿಯ ಮಾಜಿ ಸರ್ಪಂಚ್‌ ಬಲಿ, ದಂಪತಿಗೆ ಗಾಯಮಂಗಳೂರು: ಶಬರಿಮಲೆ ಯಾತ್ರಾರ್ಥಿ ಕೇರಳದಲ್ಲಿ ಹೃದಯಾಘಾತದಿಂದ ಸಾವು..!ಪ್ರಧಾನಿ ನರೇಂದ್ರ ಮೋದಿ ಹೊಸ ಬಯೋಪಿಕ್ ​: ಮೋದಿ ಪಾತ್ರದಲ್ಲಿ ಕಟ್ಟಪ್ಪ?ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ- ಪ್ರಯಾಣಿಕರು ಅಪಾಯ ಪಾರುಕಿರ್ಗಿಸ್ತಾನ್‌ನಲ್ಲಿ ಭಾರತ, ಪಾಕ್ ವಿದ್ಯಾರ್ಥಿಗಳ ಮೇಲೆ ಹಲ್ಲೆ