ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಚ್ಚಾ ಬಾಂಬ್‌ಗಳ ತಯಾರಿಕೆಯ ಸಂದರ್ಭದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ 24 ಪರಗಣ ಜಿಲ್ಲೆಯ ಹರೋವಾ ಪ್ರದೇಶದ ಶಾಲಿಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದೆ.
https://bcsuddi.com/%e0%b2%b5%e0%b2%bf%e0%b2%a7%e0%b2%be%e0%b2%a8-%e0%b2%aa%e0%b2%b0%e0%b2%bf%e0%b2%b7%e0%b2%a4%e0%b3%8d-%e0%b2%a8%e0%b3%82%e0%b2%a4%e0%b2%a8-%e0%b2%b8%e0%b2%a6%e0%b2%b8%e0%b3%8d%e0%b2%af%e0%b2%b0/
ಮೃತರನ್ನು ಪರಿತೋಷ್ ಮೊಂಡಲ್ ಎಂದು ಗುರುತಿಸಲಾಗಿದೆ. ಘಟನೆ ಸಂಬಂಧ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಬಸಿರ್‌ಹತ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗಾಯಗೊಂಡವರನ್ನು ಬಸಿರ್ಹತ್ ಉಪ-ವಿಭಾಗೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ನಾವು ಸ್ಫೋಟದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆಗೆ ಮುನ್ನ ರಾಜ್ಯದ ಹಲವು ಭಾಗಗಳಲ್ಲಿ ಹಿಂಸಾಚಾರಗಳು ವರದಿಯಾಗಿದ್ದು, ಹಲವಾರು ಜೀವಗಳನ್ನು ಕಳೆದುಕೊಂಡಿವೆ.