ಕೋಲ್ಕತ್ತ: ಬಿಗಿ ಭದ್ರತೆಯ ನಡುವೆ ಪಶ್ಚಿಮ ಬಂಗಾಳ ಪಂಚಾಯಿತಿ ಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಬೆಳಿಗ್ಗೆ 6 ಗಂಟೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಜನರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ರಾಜ್ಯದಲ್ಲಿ ಒಟ್ಟು 5.67 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದಾರೆ. ಮೂರು ಹಂತದ ಪಂಚಾಯಿತಿ ವ್ಯವಸ್ಥೆಯಲ್ಲಿ 73,887 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ.
https://bcsuddi.com/%e0%b2%95%e0%b2%be%e0%b2%b8%e0%b2%b0%e0%b2%97%e0%b3%8b%e0%b2%a1%e0%b3%81-%e0%b2%ac%e0%b3%8d%e0%b2%af%e0%b2%be%e0%b2%82%e0%b2%95%e0%b3%8d-%e0%b2%ae%e0%b3%8d%e0%b2%af%e0%b2%be%e0%b2%a8%e0%b3%87/
ಚುನಾವಣೆಗೆ ದಿನಾಂಕ ಘೋಷಣೆಯಾದಂತೆ ಈವರೆಗೆ ಸಂಭವಿಸಿದ ಹಿಂಸಾಚಾರದಲ್ಲಿ 15ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ರಾಜ್ಯದ 70 ಸಾವಿರ ಪೊಲೀಸ್ ಸಿಬ್ಬಂದಿ ಜತೆಗೆ ಕನಿಷ್ಠ 600 ತುಕಡಿ ಕೇಂದ್ರ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.