Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೋಷಕರೇ ಎಚ್ಚರ : ಬಾಲ್ಯವಿವಾಹ ಮಾಡಿಸಿದರೆ 2 ವರ್ಷ ಜೈಲು, ₹1 ಲಕ್ಷ ದಂಡ ಫಿಕ್ಸ್.!

18 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹಾಗೂ 21 ವರ್ಷದೊಳಗಿನ ಗಂಡುಮಕ್ಕಳಿಗೆ ಮದುವೆ ಮಾಡುವುದು ಕಾನೂನುಬಾಹಿರವಾಗಿದ್ದು, ಇದು ಸಮಾಜಕ್ಕೆ ದೊಡ್ಡ ಪಿಡುಗಾಗಿದೆ ಎಂದು ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವಿ.ಪಿ. ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ, ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯ ಸಂಡೂರು ಹಾಗೂ ಎಸ್.ಇ.ಎಸ್ ಬಾಲಕಿಯರ ಪ್ರೌಢಶಾಲೆ ಸಂಡೂರು ಇವರ ಸಂಯುಕ್ತಾಶ್ರಯದಲ್ಲಿ ಶಾಲಾ ಸಭಾಭವನದಲ್ಲಿ ವಿದ್ಯಾರ್ಥಿನಿಯರಿಗಾಗಿ ಹಮ್ಮಿಕೊಳ್ಳಲಾಗಿದ್ದ ‘ಬಾಲ್ಯವಿವಾಹ ನಿಷೇಧ ಹಾಗೂ ಹದಿಹರೆಯದವರ ಆರೋಗ್ಯ ರಕ್ಷಣೆ’ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬಡತನ, ಅಜ್ಞಾನ, ಮೂಢನಂಬಿಕೆ ಹಾಗೂ ಕುಟುಂಬದ ಆಸ್ತಿ ಉಳಿಸಿಕೊಳ್ಳುವ ಉದ್ದೇಶದಿಂದ ಇಂದಿಗೂ ಬಾಲ್ಯವಿವಾಹಗಳು ನಡೆಯುತ್ತಿರುವುದು ವಿಷಾದನೀಯ. ಇದರಿಂದ ಹೆಣ್ಣುಮಕ್ಕಳ ಶಿಕ್ಷಣ ಮತ್ತು ಭವಿಷ್ಯಕ್ಕೆ ಅಡ್ಡಿಯಾಗುವುದಲ್ಲದೆ, ಅವರ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತದೆ. ಬಾಲ್ಯದಲ್ಲಿ ಗರ್ಭಧಾರಣೆಯಾಗುವುದರಿಂದ ರಕ್ತಹೀನತೆ, ಅಪೌಷ್ಟಿಕತೆ, ತಾಯಿ ಮತ್ತು ಶಿಶು ಮರಣದ ಅಪಾಯಗಳು ಹೆಚ್ಚಾಗುತ್ತವೆ ಎಂದು ಅವರು ತಿಳಿಸಿದರು.

ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಬಾಲ್ಯವಿವಾಹ ಮಾಡಿಸುವುದು, ಅದರಲ್ಲಿ ಭಾಗಿಯಾಗುವುದು ಅಥವಾ ಪ್ರೋತ್ಸಾಹಿಸುವುದು ಶಿಕ್ಷಾರ್ಹ ಅಪರಾಧ. ತಪ್ಪಿತಸ್ಥರಿಗೆ 2 ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲು ಅವಕಾಶವಿದೆ. ಬಾಲ್ಯವಿವಾಹ ನಡೆಯುತ್ತಿರುವುದು ಕಂಡುಬAದರೆ ಸಾರ್ವಜನಿಕರು ತಕ್ಷಣ ಮಕ್ಕಳ ಉಚಿತ ಸಹಾಯವಾಣಿ 1098 ಅಥವಾ 112ಕ್ಕೆ ಕರೆ ಮಾಡಿ ದೂರು ನೀಡಬಹುದು ಎಂದು ಮಾಹಿತಿ ನೀಡಿದರು.

ಇದೇ ವೇಳೆ ಪೋಕ್ಸೋ ಕಾಯ್ದೆ-2012 ಹಾಗೂ ಮಾನಸಿಕ ಆರೋಗ್ಯ ನೆರವಿಗಾಗಿ ‘ಟೆಲಿ-ಮನಸ್’ (14416) ಉಚಿತ ಸಹಾಯವಾಣಿಯ ಬಗ್ಗೆಯೂ ಜಾಗೃತಿ ಮೂಡಿಸಿದರು.

ಹಿರಿಯ ಆರೋಗ್ಯ ನಿರೀಕ್ಷಾಣಾಧಿಕಾರಿ ಬಂಡೇಗೌಡ ಅವರು ಕ್ಷಯ, ಕುಷ್ಠರೋಗ ಹಾಗೂ ಸೊಳ್ಳೆಗಳಿಂದ ಹರಡುವ ಮಲೇರಿಯಾ, ಡೆಂಗ್ಯೂ ಮುಂತಾದ ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಕುರಿತು ವಿವರವಾಗಿ ಮಾತನಾಡಿದರು. ಆರ್.ಕೆ.ಎಸ್.ಕೆ ಆಪ್ತಸಮಾಲೋಚಕ ಪತ್ರೆಗೌಡ ಅವರು ಮೈತ್ರಿ ಮುಟ್ಟಿನ ಕಪ್ ಬಳಕೆ ಹಾಗೂ ಪೋಷಣ್ ಮಾಸಾಚರಣೆಯ ಮಹತ್ವವನ್ನು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯ ಕಲ್ಲಯ್ಯ ಮಠ ಅವರು ವಹಿಸಿದ್ದರು.

ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಅನಸೂಯ, ಎಚ್.ಐ.ಒ ಅನುಷಾ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಸಮಾರಂಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಶಾಲೆಯ ನೂರಾರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಪ್ರಧಾನಿ ಮೋದಿ, ಅಮಿತ್ ಶಾಗು 'ವಂದೇ ಮಾತರಂ' ಪೂರ್ಣ ಹಾಡು ಬರಲ್ಲ : ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ BREAKING : ತುಮಕೂರಲ್ಲಿ ಭೀಕರ ಅಪಘಾತ : ಹಿಟ್ & ರನ್ ಗೆ ನವದಂಪತಿ ದುರ್ಮರಣ!BIG NEWS : ಬೆಂಗಳೂರಿಗರೇ ಹುಷಾರ್ : ಚೌಡೇಶ್ವರಿ ಪೂಜೆ ಹೆಸರಲ್ಲಿ ಲಕ್ಷಾಂತರ ರೂ. ಒಡವೆ ಎಗರಿಸಿದ ನಕಲಿ ಜ್ಯೋತಿಷಿ!BREAKING : ಹಾಸನದ ಲಾಡ್ಜ್ ನ ಬಾತ್ರೂಮ್ ನಲ್ಲಿ ಯುವತಿ ಅನುಮಾನಾಸ್ಪದ ಸಾವು : ಸಾವಿನ ಸುತ್ತ ಅನುಮಾನದ ಹುತ್ತ!BREAKING : ರೇಣುಕಾಸ್ವಾಮಿ ಕೋಲೆ ಕೇಸ್ : ಇಂದು ಹೈಕೋರ್ಟ್ ನಲ್ಲಿ ದರ್ಶನ್ ಖುದ್ದು ಹಾಜರಿ ಕುರಿತು ಸಲ್ಲಿಸಿದ್ದ ಅರ್ಜಿಯ ವಿಚಾರಣೆ!ರಕ್ಷಣಾತ್ಮಕ ಶಕ್ತಿಶಾಲಿ ಸುದರ್ಶನ ಮಂತ್ರ​ದ ಮಹತ್ವಪೂರ್ಣ ದ ಅರ್ಥ..!!ಖಾತೆದಾರರು ಮೃತಪಟ್ಟ ಬಳಿಕ ಕಾನೂನುಬದ್ಧ ವಾರಸುದಾರರು ಬ್ಯಾಂಕ್ ಹಣ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿರಸ್ತೆ ಅಪಘಾತದ ನಂತರ ವಾಹನ ವಿಮೆ ಕ್ಲೈಮ್ ಪಡೆಯಲು ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿರಾಜ್ಯದ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲೂ ‘ಗ್ಯಾರಂಟಿ ಸಮಿತಿ’ ರಚನೆ: ಸರ್ಕಾರ ಮಹತ್ವದ ಆದೇಶRain Alert : ವಾಯುಭಾರ ಕುಸಿತ : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್ ಘೋಷಣೆ.!