E-PAPER
17 Nov 2026, 12:22:43 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಾಲಿಕೆ ಸಭೆ ಯಲ್ಲಿ ಮೈಕ್, ಎಸಿ ಕಿರಿಕಿರಿ: ಸದಸ್ಯರ ಆಕ್ರೋಶ

ಬೆಳಗಾವಿ-01: ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ನಡೆಯುವ ಸಭಾಂಗಣದಲ್ಲೇ ಮೈಕ್, ಎಸಿ ಹಾಗೂ ಫ್ಯಾನ್‌ಗಳು ಕೈಕೊಟ್ಟ ಪರಿಣಾಮ ಬುಧವಾರ ನಡೆದ ಸಭೆಯಲ್ಲಿ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳು ಪರದಾಡುವಂತಾಯಿತು.

ಮೇಯರ್ ಪ್ರೀತಿ ಕಾಮಕರ ಅವರ ಅಧ್ಯಕ್ಷತೆಯಲ್ಲಿ ಕೌನ್ಸಿಲ್ ಸಭಾಂಗಣದಲ್ಲಿ ಸಾಮಾನ್ಯ ಸಭೆ ಆರಂಭವಾಗುತ್ತಿದ್ದಂತೆಯೇ ಮೈಕ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಸದಸ್ಯರು ಮಾತನಾಡುವ ವೇಳೆ ಧ್ವನಿ ಸ್ಪಷ್ಟವಾಗಿ ಕೇಳಿಸದಿರುವುದು ಹಾಗೂ ಮೈಕ್ ಪದೇಪದೇ ಕಿರಿಕಿರಿ ಮಾಡಿದ್ದರಿಂದ ಸಭೆಯ ಕಲಾಪಕ್ಕೆ ಅಡಚಣೆ ಉಂಟಾಯಿತು.
ಮೈಕ್ ಸಮಸ್ಯೆಯಿಂದ ಅಸಮಾಧಾನಗೊಂಡ ಮೇಯರ್ ಪ್ರೀತಿ ಕಾಮಕರ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕಳೆದ ಸಾಮಾನ್ಯ ಸಭೆಯಲ್ಲಿಯೇ ಮೈಕ್ ದುರಸ್ತಿ ಮಾಡುವಂತೆ ಸೂಚಿಸಿದ್ದರೂ ಈವರೆಗೆ ಏಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಪಾಲಿಕೆ ಬಿಜೆಪಿ ಸದಸ್ಯ ರವಿ ದೋತ್ರೆ ಕೂಡ ಅಧಿಕಾರಿಗಳ ನಿರ್ವಹಣಾ ವೈಫಲ್ಯವನ್ನು ಪ್ರಶ್ನಿಸಿದರು. ಪಾಲಿಕೆಯ ನಿರ್ವಹಣೆ ಮಾಡುವವರು ಯಾರು? ಮೈಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಎಸಿಯೂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಸಾಮಾನ್ಯ ಸಭೆ ನಡೆಯುವ ಸಭಾಂಗಣದಲ್ಲೇ ಇಂತಹ ಸಮಸ್ಯೆ ಇದ್ದರೆ ಹೇಗೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೊಂದೆಡೆ ಸಭಾಂಗಣದ ಎಸಿ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಉಷ್ಣತೆ ಹೆಚ್ಚಾಗಿ ಸದಸ್ಯರು ಹಾಗೂ ಅಧಿಕಾರಿಗಳು ತೊಂದರೆ ಅನುಭವಿಸಿದರು. ಕೆಲಕಾಲ ಕೂಲರ್ ಬಳಸಲಾಯಿತಾದರೂ ಅದನ್ನು ಚಾಲನೆ ಮಾಡಿದಾಗ ಮೈಕ್‌ನಲ್ಲಿ ಕಿರಿಕಿರಿ ಉಂಟಾದ ಹಿನ್ನೆಲೆಯಲ್ಲಿ ಕೂಲರ್ ಬಂದ್ ಮಾಡಿ ಫ್ಯಾನ್‌ಗಳನ್ನು ಬಳಸಬೇಕಾಯಿತು.
ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕರ ಮೂಲಭೂತ ಸೌಲಭ್ಯಗಳ ಕುರಿತು ಚರ್ಚಿಸಬೇಕಾದ ಸಾಮಾನ್ಯ ಸಭೆಯಲ್ಲಿ ಪಾಲಿಕೆಯ ಸ್ವಂತ ಸಭಾಂಗಣದಲ್ಲೇ ಮೂಲಸೌಕರ್ಯಗಳ ಕೊರತೆ ಕಂಡುಬಂದಿರುವುದು ಸದಸ್ಯರ ಅಸಮಾಧಾನಕ್ಕೆ ಕಾರಣವಾಯಿತು.
ಮೈಕ್, ಎಸಿ, ಫ್ಯಾನ್ ಸೇರಿದಂತೆ ಸಭಾಂಗಣದಲ್ಲಿರುವ ಎಲ್ಲ ಉಪಕರಣಗಳನ್ನು ಸಭೆಗೂ ಮುನ್ನವೇ ಪರಿಶೀಲಿಸಿ, ದೋಷಗಳನ್ನು ನಿವಾರಿಸುವಂತೆ ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.