LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪಿಎಂ ಕಿಸಾನ್‌‌ ಸಮ್ಮಾನ್ ಯೋಜನೆಯ 18ನೇ ಕಂತಿನ ಹಣ ಬಿಡುಗಡೆ

ನವದೆಹಲಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 18ನೇ ಕಂತಿನ ಬಿಡುಗಡೆಗೆ 9 ಕೋಟಿಗೂ ಅಧಿಕ ರೈತರು ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಾಳೆ ಶನಿವಾರ (ಅ. 5) 18ನೇ ಕಂತಿನ ಹಣ ಬಿಡುಗಡೆ ಮಾಡುತ್ತಿದ್ದಾರೆ. ಮಹಾರಾಷ್ಟ್ರಕ್ಕೆ ಪ್ರಧಾನಿಗಳು ನಾಳೆ ಭೇಟಿ ನೀಡಲಿದ್ದು ಅಂದೇ ಪಿಎಂ ಕಿಸಾನ್ ಹಣ ಬಿಡುಗಡೆ ಹಾಗೂ ಇತರ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. 9.4 ಕೋಟಿ ಫಲಾನುಭವಿ ರೈತರ ಖಾತೆಗಳಿಗೆ ತಲಾ 2,000 ರೂ ಸಿಗಲಿದೆ. ಕೇಂದ್ರದಿಂದ ನಾಳೆ ಪಿಎಂ ಕಿಸಾನ್ ಫಲಾನುಭವಿಗಳಿಗೆ ಒಟ್ಟು 20,000 ಕೋಟಿ ರೂ ಹಣ ಬಿಡುಗಡೆ ಆಗಲಿದೆ. 2019ರಲ್ಲಿ ಆರಂಭವಾದ ಈ ಸ್ಕೀಮ್​ನಲ್ಲಿ ಐದು ವರ್ಷದಲ್ಲಿ 3 ಲಕ್ಷ ಕೋಟಿಗೂ ಅಧಿಕ ಹಣವನ್ನು ಸರ್ಕಾರ ವ್ಯಯಿಸಿದೆ. ನಾಳೆಯ ಬಿಡುಗಡೆ ಸೇರಿಸಿದರೆ ಸರ್ಕಾರದ ವೆಚ್ಚ ಸುಮಾರು 3.45 ಲಕ್ಷ ಕೋಟಿ ರೂ ಆಗಬಹುದು. 2024ರ ಜೂನ್ 18ರಂದು ಪ್ರಧಾನಿಗಳು ವಾರಾಣಸಿಯಲ್ಲಿ ಪಿಎಂ ಕಿಸಾನ್ 17ನೇ ಕಂತಿನ ಹಣ ಬಿಡುಗಡೆ ಮಾಡಿದ್ದರು. 9.26 ಕೋಟಿ ರೈತರ ಖಾತೆಗಳಿಗೆ 21,000 ಕೋಟಿ ರೂ ಹಣ ಸಂದಾಯವಾಗಿತ್ತು. ಪಿಎಂ ಕಿಸಾನ್ ಸ್ಕೀಮ್​ನಲ್ಲಿ ರೈತರಿಗೆ ಸರ್ಕಾರ ವರ್ಷಕ್ಕೆ 6,000 ರೂ ಹಣವನ್ನು ಸಹಾಯಧನವಾಗಿ ನೀಡುತ್ತದೆ. 2,000 ರೂಗಳಂತೆ ವರ್ಷಕ್ಕೆ ಮೂರು ಕಂತುಗಳಲ್ಲಿ ಈ ಹಣವನ್ನು ರೈತರ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ. ಬೇಸಾಯಕ್ಕೆ ಸಹಾಯವಾಗಲೆಂದು ಸರ್ಕಾರ ಡಿಬಿಟಿ ಸ್ಕೀಮ್​ನಲ್ಲಿ ಈ ಸಹಾಯಧನ ಒದಗಿಸುತ್ತಿದೆ. ವಿಶ್ವದ ಯಾವುದೇ ದೇಶದಲ್ಲೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಫಲಾನುಭವಿಗಳಿಗೆ ನೇರವಾಗಿ ಹಣ ವರ್ಗಾವಣೆ ಆಗುವುದಿಲ್ಲ. ಆ ಮಟ್ಟಿಗೆ ಪಿಎಂ ಕಿಸಾನ್ ಸ್ಕೀಮ್ ದಾಖಲೆ ಮಾಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಿಗ್ಗೆ ಎದ್ದ ತಕ್ಷಣ ಏನನ್ನು ನೋಡಬೇಕು, ಏನನ್ನು ನೋಡಬಾರದು?ವಚನ-ಮನಸಂದ ಮಾರಿತಂದೆ !ಶಿಕ್ಷಣ ವೃತ್ತಿ ಬಿಟ್ಟು ಬೇರೆ ವ್ಯವಹಾರ ತೊಡಗಿದ ಶಿಕ್ಷಕರಿಗೆ ಶಿಸ್ತು ಕ್ರಮ.!ನಿಮ್ಮ ಮನೆಯಲ್ಲಿ ನಿಮ್ಮ ಪತಿ ಅಥವಾ ಪತ್ನಿ ನೀವು ಹೇಳಿದ ಮಾತು ಕೇಳುತ್ತಿಲ್ವಾ ಈ ಒಂದು ಕಡ್ಡಿಯಿಂದ ಹೀಗೆ ಮಾಡಿ ಸಾಕು ಆಮೇಲೆ ನೀವು ಹೇಳಿದ್ದನ್ನು ಎಲ್ಲವನ್ನು ಕೂಡ ಕೇಳುತ್ತಾರೆ .!ಕೇಂದ್ರ ಬಜೆಟ್‌ ಬಗ್ಗೆ ರಾಹುಲ್‌ ಗಾಂಧಿ ಪ್ರತಿಕ್ರಿಯೆ!ಸಿಎಂ ರಾಜಕೀಯ ಸಲಹೆಗಾರ ಹುದ್ದೆಗೆ ಶಾಸಕ ಬಿ.ಆರ್ ಪಾಟೀಲ್ ರಾಜೀನಾಮೆಮಂಗಳೂರು ಬ್ಯಾಂಕ್ ದರೋಡೆ ಪ್ರಕರಣ: ಮತ್ತೊಂದು ಶೂಟೌಟ್ಕೇಂದ್ರ ಬಜೆಟ್ ಬಗ್ಗೆ ಸಿಎಂ ಹೇಳಿದ್ದು ಇದು.!ಜನಪರ ಯೋಜನೆಗಳ ಜಾರಿಗೆ ಸರ್ಕಾರ ಬದ್ದ : ಹೆಚ್.ಎಂ. ರೇವಣ್ಣಗ್ಯಾರಂಟಿ ಯೋಜನೆ: ಗೇಲಿ ಮಾಡಿದವರ ಬಾಯಿಂದಲೇ ಪ್ರಶಂಸೆ